ಬಿಜೆಪಿ ಪ್ರತಿಭಟನೆಗೆ ಮಣಿದ ದಿನೇಶ್ ಗುಂಡೂರಾವ್ ಅವರು, ನಾನು ಉದ್ದೇಶಪೂರ್ವಕವಾಗಿ ಹೇಳಿಲ್ಲ. ಕಥುವಾ ಮತ್ತು ಉನ್ನಾವ್ ಅತ್ಯಾಚಾರ ಪ್ರಕರಣಗಳನ್ನು ಖಂಡಿಸಿ ನಡೆದ ಪ್ರತಿಭಟನೆ ವೇಳೆ ಭಾವೋದ್ವೇಗದಿಂದ ಹೇಳಿದ್ದೇನೆ. ಅದರ ಬಗ್ಗೆ ನನಗೆ ವಿಷಾದವಿದೆ. ಆದರೆ, ವಿಷಯ ಗಂಭೀರ, ಅದರ ಬಗ್ಗೆ ಕ್ರಮವಾಗಬೇಕು. ನನ್ನ ಮಾತಿನ ಹಿನ್ನೆಲೆಯನ್ನು ಅರ್ಥಮಾಡಿಕೊಳ್ಳಬೇಕು. ಒಬ್ಬ ಮಹಿಳೆಗೆ ನ್ಯಾಯಕೊಡಿಸಬೇಕು ಎಂದಬುದೇ ನಮ್ಮ ಉದ್ದೇಶವಾಗಿತ್ತು ಬೇರೇನೂ ಅಲ್ಲ ಎಂದು ಟ್ವೀಟ್ ಮಾಡಿದ್ದಾರೆ.