ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಚಾಮುಂಡೇಶ್ವರಿಯಿಂದ ಮಾತ್ರ ಸಿಎಂ ಸಿದ್ದರಾಮಯ್ಯ ಸ್ಪರ್ಧೆ!

ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಲಿರುವ ಅಭ್ಯರ್ಥಿಗಳ ಪಟ್ಟಿಯನ್ನು ಕಾಂಗ್ರೆಸ್‌ ಭಾನುವಾರ ಬಿಡುಗಡೆ ಮಾಡಿದ್ದು, ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರವೊಂದರಲ್ಲಿ ಮಾತ್ರ ಸಿಎಂ ಸಿದ್ದರಾಮಯ್ಯ ಸ್ಪರ್ಧೆ ಮಾಡಲಿದ್ದಾರೆ.
ಬೆಂಗಳೂರು: ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಲಿರುವ ಅಭ್ಯರ್ಥಿಗಳ ಪಟ್ಟಿಯನ್ನು ಕಾಂಗ್ರೆಸ್‌ ಭಾನುವಾರ ಬಿಡುಗಡೆ ಮಾಡಿದ್ದು, ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರವೊಂದರಲ್ಲಿ ಮಾತ್ರ ಸಿಎಂ ಸಿದ್ದರಾಮಯ್ಯ ಸ್ಪರ್ಧೆ ಮಾಡಲಿದ್ದಾರೆ.
ಈ ಹಿಂದೆ ಸೋಲಿನ ಶಂಕೆ ಹಿನ್ನಲೆಯಲ್ಲಿ ಸಿಎಂ ಸಿದ್ದರಾಮಯ್ಯ ಎರಡು ಕ್ಷೇತ್ರಗಳಲ್ಲಿ ಸ್ಪರ್ಧಿಸಲಿದ್ದಾರೆ ಎಂದು ಹೇಳಲಾಗಿತ್ತು. ರಾಜ್ಯ ಗುಪ್ತಚರ ಇಲಾಖೆ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸಿಎಂ ಸಿದ್ದರಾಮಯ್ಯ ಸೋಲುವ ಸಾಧ್ಯತೆ ಇದೆ ಎಂದು ಹೇಳಿದೆ ಎಂದು ಕೆಲ ವರದಿಗಳು ಪ್ರಸಾರವಾಗಿತ್ತು. ಹೀಗಾಗಿ ಸಿಎಂ ಸಿದ್ದರಾಮಯ್ಯ ಚಾಮುಂಡೇಶ್ವರಿ ಅಲ್ಲದೇ ಎರಡನೇ ಕ್ಷೇತ್ರದಲ್ಲಿ ಸ್ಪರ್ಧಿಸಲಿದ್ದಾರೆ ಎಂದು ಹೇಳಲಾಗಿತ್ತು. ಇದಕ್ಕೆ ಇಂಬು ನೀಡುವಂತೆ ಸಿದ್ದರಾಮಯ್ಯ ಅವರು ಬಾದಾಮಿ ಕ್ಷೇತ್ರದಿಂದ ಸ್ಪರ್ಧೆ ಮಾಡುವುದು ಖಚಿತ ಎಂದೂ ಹೇಳಲಾಗಿತ್ತು.
ಆದರೆ ಇಂದು ಬಿಡುಗಡೆ ಮಾಡಿರುವ ಅಭ್ಯರ್ಥಿಗಳ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯ ಒಂದೇ ಕ್ಷೇತ್ರದಿಂದ ಅದರಲ್ಲೂ ಚಾಮುಂಡೇಶ್ವರಿ ಕ್ಷೇತ್ರದಿಂದ ಮಾತ್ರ ಸ್ಪರ್ಧೆ ಮಾಡಲಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರ 2ನೇ ಕ್ಷೇತ್ರ ಎಂದು ಹೇಳಲಾಗುತ್ತಿದ್ದ ಬಾದಾಮಿ ಕ್ಷೇತ್ರದಿಂದ ಡಾ. ದೇವರಾಜ್ ಪಾಟೀಲ್ ಅವರಿಗೆ ಟಿಕೆಟ್ ನೀಡಲಾಗಿದೆ.
ಇನ್ನು ಹಾಲಿ ಪಟ್ಟಿಯಲ್ಲಿ ಬಹುತೇಕ ಹಾಲಿ ಶಾಸಕರಿಗೆ ಟಿಕೆಟ್ ನೀಡಲಾಗಿದೆಯಾದರೂ, 16 ಹಾಲಿ ಶಾಸಕರಿಗೆ ಟಿಕೆಟ್ ನಿರಾಕರಿಸಲಾಗಿದೆ. 

Related Stories

No stories found.

Advertisement

X
Kannada Prabha
www.kannadaprabha.com