ಚಿಕ್ಕೋಡಿ–ಸದಲಗಾ, ನಿಪ್ಪಾಣಿ ಕ್ಷೇತ್ರದಲ್ಲಿ ಪತಿ-ಪತ್ನಿಗೆ ಬಿಜೆಪಿ ಟಿಕೆಟ್

ಕಾಂಗ್ರೆಸ್, ಜೆಡಿಎಸ್ ಕುಟುಂಬ ರಾಜಕೀಯದ ಬಗ್ಗೆ ಮಾತನಾಡುತ್ತಿದ್ದ ಬಿಜೆಪಿ ಸಹ ವಿಧಾನಸಭೆ ಚುನಾವಣೆಯಲ್ಲಿ....
ಶಿಕಲಾ ಜೊಲ್ಲೆ - ಅಣ್ಣಾಸಾಹೇಬ ಜೊಲ್ಲೆ
ಶಿಕಲಾ ಜೊಲ್ಲೆ - ಅಣ್ಣಾಸಾಹೇಬ ಜೊಲ್ಲೆ
ಬೆಳಗಾವಿ: ಕಾಂಗ್ರೆಸ್, ಜೆಡಿಎಸ್ ಕುಟುಂಬ ರಾಜಕೀಯದ ಬಗ್ಗೆ ಮಾತನಾಡುತ್ತಿದ್ದ ಬಿಜೆಪಿ ಸಹ ವಿಧಾನಸಭೆ ಚುನಾವಣೆಯಲ್ಲಿ ಪತಿ, ಪತ್ನಿ ಇಬ್ಬರಿಗೂ ಟಿಕೆಟ್ ನೀಡಿದೆ.
ನಿಪ್ಪಾಣಿ ಹಾಲಿ ಶಾಸಕಿ ಹಾಗೂ ಉದ್ಯಮಿ ಅಣ್ಣಾಸಾಹೇಬ ಜೊಲ್ಲೆ ಅವರ ಪತ್ನಿ ಶಶಿಕಲಾ ಜೊಲ್ಲೆ ಅವರಿಗೆ ಮೊದಲ ಪಟ್ಟಿಯಲ್ಲಿ ಟಿಕೆಟ್ ನೀಡಿದ್ದ ಬಿಜೆಪಿ, ಇಂದು ಪ್ರಕಟಗೊಂಡ ಎರಡನೇ ಪಟ್ಟಿಯಲ್ಲಿ ಪತಿ ಅಣ್ಣಾಸಾಹೇಬ ಜೊಲ್ಲೆ ಚಿಕ್ಕೋಡಿ–ಸದಲಗಾ ಕ್ಷೇತ್ರಕ್ಕೆ ಟಿಕೆಟ್‌ ನೀಡಲಾಗಿದೆ.
2004ರಲ್ಲಿ ಕ್ಷೇತ್ರದಲ್ಲಿ ಬಿಜೆಪಿಯಿಂದ ಸ್ಪರ್ಧಿಸಿದ್ದ ಅಣ್ಣಾಸಾಹೇಬ ಜೊಲ್ಲೆ ಅವರು ಕಾಂಗ್ರೆಸ್ ನ ಪ್ರಕಾಶ ಹುಕ್ಕೇರಿ ವಿರುದ್ಧ ಸೋತಿದ್ದರು.
ಕ್ಷೇತ್ರ ಪುನರ್‌ವಿಂಗಡಣೆಯ ನಂತರ 2008ರಲ್ಲಿ ನಿಪ್ಪಾಣಿ ಕ್ಷೇತ್ರದಿಂದ ಪತ್ನಿ ಶಶಿಕಲಾ ಜೊಲ್ಲೆ ಅವರನ್ನು ಕಣಕ್ಕಿಳಿಸಿದ್ದರು. ಕಾಂಗ್ರೆಸ್‌ನ ಕಾಕಾಸಾಹೇಬ ಪಾಟೀಲ ಅವರ ಎದುರು ಪರಾಭವಗೊಂಡಿದ್ದರು. 2013ರಲ್ಲಿ ಪುನಃ ಸ್ಪರ್ಧಿಸಿ, ಗೆಲುವು ಸಾಧಿಸಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com