ಕಾಂಗ್ರೆ ಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲು ವಿಳಂಬ ಮಾಡಿದ್ದೇಕೆ?

ನಿನ್ನೆ ಅಪರಾಹ್ನ 3 ಗಂಟೆಗೆ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡುವುದಾಗಿ ಅಖಿಲ ಭಾರತ ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on: 

ಬೆಂಗಳೂರು: ನಿನ್ನೆ ಅಪರಾಹ್ನ 3 ಗಂಟೆಗೆ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡುವುದಾಗಿ ಅಖಿಲ ಭಾರತ ಕಾಂಗ್ರೆಸ್ ಸಮಿತಿ ಆರಂಭದಲ್ಲಿ ಘೋಷಿಸಿತ್ತು. ಆದರೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಎಐಸಿಸಿ ಕರ್ನಾಟಕ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಮತ್ತು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ದೆಹಲಿಯಲ್ಲಿ ರಾಹುಲ್ ಗಾಂಧಿಯವರ ಜೊತೆ ಮಾತುಕತೆ ನಡೆಸಿ ಬೆಂಗಳೂರಿಗೆ ಹೊರಟ ನಂತರವೂ ಪಟ್ಟಿ ಬಿಡುಗಡೆ ಮಾಡುವಲ್ಲಿ ವಿಳಂಬವಾಗಿದ್ದು ಕಾಂಗ್ರೆಸ್ ನೊಳಗೆ ಭಿನ್ನಾಭಿಪ್ರಾಯದ ಊಹಾಪೋಹಗಳನ್ನು ಬಲಗೊಳಿಸಿದೆ.

ಟಿಕೆಟ್ ಆಕಾಂಕ್ಷಿಗಳ ಬೆಂಬಲಿಗರು ಮತ್ತು ಟಿಕೆಟ್ ಕೈ ತಪ್ಪಿ ಹೋಗುವುದಾಗಿ ತಿಳಿದಿದ್ದ ಹಾಲಿ ಶಾಸಕರ ಬೆಂಬಲಿಗರು ರಾಜ್ಯದ ಅಲ್ಲಲ್ಲಿ ನಿನ್ನೆ ಪ್ರತಿಭಟನೆ ನಡೆಸಿದ್ದರು. ಪಟ್ಟಿ ಬಿಡುಗಡೆಗೊಂಡರೆ ಗಲಾಟೆಯಾಗಬಹುದೇ ಎಂಬ ಆತಂಕ ಕೂಡ ಪಕ್ಷದ ನಾಯಕರಲ್ಲಿತ್ತು.
ಇಂತಹ ಸಂದರ್ಭದಲ್ಲಿ ತಾವು ಬೆಂಗಳೂರಿಗೆ ತಲುಪಿ ಟಿಕೆಟ್ ಕೈತಪ್ಪಿ ಹೋದ ನಾಯಕರಲ್ಲಿ ಮಾತನಾಡಿ ಅವರನ್ನು ಸಮಾಧಾನಗೊಳಿಸುವವರೆಗೆ ಪಟ್ಟಿ ಬಿಡುಗಡೆ ಮಾಡದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಪಕ್ಷದ ಹೈಕಮಾಂಡ್ ಗೆ ಮನವಿ ಮಾಡಿದ್ದರು ಎಂದು ತಿಳಿದುಬಂದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com