ಯೋಗಿ ವಿರುದ್ಧ ಹೇಳಿಕೆ: ದಿನೇಶ್ ಗುಂಡುರಾವ್ ವಿರುದ್ಧ ಎಫ್ಐಆರ್ ದಾಖಲು

ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿರುದ್ಧ ವಿವಾದಾತ್ಮಕ ಹೇಳಿಕೆ ನಿಡಿದ್ದ ಕೆಪಿಸಿಸಿ...
ದಿನೇಶ್ ಗುಂಡುರಾವ್
ದಿನೇಶ್ ಗುಂಡುರಾವ್
Updated on
ಬೆಂಗಳೂರು: ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿರುದ್ಧ ವಿವಾದಾತ್ಮಕ ಹೇಳಿಕೆ ನಿಡಿದ್ದ ಕೆಪಿಸಿಸಿ ಕಾರ್ಯಧ್ಯಕ್ಷ  ದಿನೇಶ್ ಗುಂಡೂರಾವ್ ಅವರ ವಿರುದ್ಧ ಮಂಗಳವಾರ ಎಫ್ಐಆರ್ ದಾಖಲಿಸಲಾಗಿದೆ. 
ಯೋಗಿ ಆದಿತ್ಯನಾಥ ಅವರು ಕರ್ನಾಟಕಕ್ಕೆ ಬಂದರೆ ಚಪ್ಪಲಿಯಿಂದ ಹೊಡಿಯಿರಿ ಎಂದು ಪ್ರಚೋದನಾತ್ಮಕ ಹೇಳಿಕೆ ನೀಡಿದ್ದ ದಿನೇಶ್ ಗುಂಡೂರಾವ್ ಅವರ ವಿರುದ್ಧ ಬಿ.ರಾಮಾಚಾರಿ ಎಂಬುವವರು ನೀಡಿದ್ದ ದೂರಿನ ಆಧಾರದ ಮೇಲೆ ಹೈಗ್ರೌಡ್ಸ್  ಪೊಲೀಸ್ ಠಾಣೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
'ಯೋಗಿ ಒಬ್ಬ ಡೊಂಗಿ ರಾಜಕಾರಣಿ. ಅವರೇನಾದರೂ ಮತ್ತೆ ಕರ್ನಾಟಕಕ್ಕೆ ಬಂದಲ್ಲಿ ಚಪ್ಪಲಿಯಲ್ಲಿ ಹೊಡೆಯಿರಿ' ಎಂದು ದಿನೇಶ್ ಗುಂಡುರಾವ್ ಅವರು ಹೇಳಿದ್ದರು.
ಬಳಿಕ ತಮ್ಮ ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ್ದ ಗಂಡುರಾವ್, ನಾನು ಉದ್ದೇಶಪೂರ್ವಕವಾಗಿ ಹೇಳಿಲ್ಲ. ಕಥುವಾ ಮತ್ತು ಉನ್ನಾವ್‌ ಅತ್ಯಾಚಾರ ಪ್ರಕರಣಗಳನ್ನು ಖಂಡಿಸಿ ನಡೆದ ಪ್ರತಿಭಟನೆ ವೇಳೆ ಭಾವೋದ್ವೇಗದಿಂದ ಹೇಳಿದ್ದೇನೆ. ಅದರ ಬಗ್ಗೆ ನನಗೆ ವಿಷಾದವಿದೆ. ಆದರೆ, ವಿಷಯ ಗಂಭೀರ, ಅದರ ಬಗ್ಗೆ ಕ್ರಮವಾಗಬೇಕು. ನನ್ನ ಮಾತಿನ ಹಿನ್ನೆಲೆಯನ್ನು ಅರ್ಥಮಾಡಿಕೊಳ್ಳಬೇಕು. ಒಬ್ಬ ಮಹಿಳೆಗೆ ನ್ಯಾಯಕೊಡಿಸಬೇಕು ಎಂದಬುದೇ ನಮ್ಮ ಉದ್ದೇಶವಾಗಿತ್ತು ಬೇರೇನೂ ಅಲ್ಲ ಎಂದು ಟ್ವೀಟ್ ಮಾಡಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com