ಟ್ವೀಟ್ ಮಾಡಿರುವ ಸಿಎಂ, ರೈತರ ಸಾಲ ಮನ್ನಾಗೆ ಸಂಬಂಧಿಸಿದಂತೆ ಕೇಂದ್ರ ಸಚಿವರು ನಮ್ಮ ವಿರುದ್ಧ ಟೀಕೆ ಮಾಡುತ್ತಾರೆ. ಆದರೆ ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾಗ ಇದೇ ವಿಷಯಕ್ಕೆ ಸಂಬಂಧಿಸಿದಂತೆ ನಮ್ಮ ಬಳಿ ನೋಟು ಮುದ್ರಿಸುವ ಯಂತ್ರ ಇಲ್ಲ ಎಂದಿದ್ದರು. ಪ್ರಧಾನಿ ನರೇಂದ್ರ ಮೋದಿ ಸರ್ಕಾರ ರೈತರ ಸಾಲ ಮನ್ನಾ ಮಾಡುವ ಬದಲು ಕಾರ್ಪೊರೇಟ್ ಗಳಿಗೆ ಏಕೆ ಸಹಾಯ ಮಾಡುತ್ತಾರೆ ಎಂದು ಪ್ರಶ್ನಿಸಿದ್ದಾರೆ.