ಅಭ್ಯರ್ಥಿಗಳ ಆಯ್ಕೆಯಲ್ಲಿ ಗೆಲುವೊಂದೇ ಮಾನದಂಡ: ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್

ಟಿಕೆಟ್ ಹಂಚಿಕೆ ಪ್ರಕ್ರಿಯೆಯನ್ನು ಸಮರ್ಥಿಸಿಕೊಂಡಿರುವ ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ಅವರು ಅಭ್ಯರ್ಥಿಗಳ ಆಯ್ಕೆಯಲ್ಲಿ ಗೆಲುವೊಂದೇ ಮಾನದಂಡವಾಗಿದೆ ಎಂದು ಸೋಮವಾರ ಹೇಳಿದ್ದಾರೆ...
ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್
ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್
Updated on: 
ಬೆಂಗಳೂರು: ಟಿಕೆಟ್ ಹಂಚಿಕೆ ಪ್ರಕ್ರಿಯೆಯನ್ನು ಸಮರ್ಥಿಸಿಕೊಂಡಿರುವ ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ಅವರು ಅಭ್ಯರ್ಥಿಗಳ ಆಯ್ಕೆಯಲ್ಲಿ ಗೆಲುವೊಂದೇ ಮಾನದಂಡವಾಗಿದೆ ಎಂದು ಸೋಮವಾರ ಹೇಳಿದ್ದಾರೆ. 
ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿರುವ ಅವರು, ಅಭ್ಯರ್ಥಿಗಳ ಪಟ್ಟಿಯನ್ನು ಸ್ಕ್ರೀನಿಂಗ್ ಸಮಿತಿ ಮತ್ತು ಕೇಂದ್ರ ಚುನಾವಣಾ ಸಮಿತಿಗೆ ಕಳುಹಿಸುವುದಕ್ಕೂ ಮುನ್ನ ಜಿಲ್ಲಾ ಘಟಕಗಳು ಹಾಗೂ ರಾಜ್ಯ ನಾಯಕರ ಅಭಿಪ್ರಾಯಗಳನ್ನು ಸಂಗ್ರಹಿಸಲಾಗುತ್ತಿದೆ ಎಂದು ಹೇಳಿದ್ದಾರೆ. 
ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರಲು ನಿಶ್ಚಯ ಮಾಡಲಾಗಿದೆ. ಹೀಗಾಗಿ ಅಭ್ಯರ್ಥಿಗಳ ಆಯ್ಕೆಯಲ್ಲಿ ಗೆಲ್ಲುವ ಅಭ್ಯರ್ಥಿಯೊಂದೇ ಮಾನದಂಡವಾಗಿದೆ. ಪಕ್ಷದ ಹೈ ಕಮಾಂಡ್ ಕೂಡ ನಮಗೆ ಇದೇ ನಿರ್ದೇಶವನ್ನು ನೀಡಿದೆ. ಇದನ್ನು ನಾವು ಅನುಸರಿಸುತ್ತಿದ್ದೇವೆ. ಪ್ರತೀಯೊಬ್ಬರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುತ್ತೇವೆಂದು ತಿಳಿಸಿದ್ದಾರೆ. 
ಹ್ಯಾರಿಸ್'ಗೆ ಟಿಕೆಟ್
ಭಾನುವಾರ ರಾತ್ರಿ ಬಿಡುಗಡೆ ಮಾಡಲಾಗಿದ್ದ ಪಟ್ಟಿಯಲ್ಲಿ ಹ್ಯಾರಿಸ್ ಅವರ ಹೆಸರಿರಲಿಲ್ಲ. ಶಾಂತಿನಗರ ಶಾಸಕ ಎನ್ಎ.ಹ್ಯಾರಿಸ್ ಅವರಿಗೆ ಟಿಕೆಟ್ ನೀಡಲಾಗುತ್ತದೆ ಎಂದು ಪರಮೇಶ್ವರ್ ಅವರು ಹೇಳಿದ್ದಾರೆ. 

ಕೆಲಸ ತಾಂತ್ರಿಕ ಸಮಸ್ಯೆಗಳಿಂದಾಗಿ ಈ ರೀತಿಯಾಗಿದೆಯ 1-2 ದಿನಗಳಲ್ಲಿ ಎಲ್ಲವೂ ಸ್ಪಷ್ಟವಾಗಲಿದ ಎಂದು ತಿಳಿಸಿದ್ದಾರೆ. 

ಏ.26-27ಕ್ಕೆ ರಾಹುಲ್ ರಾಜ್ಯಕ್ಕೆ
ಇದೇ ತಿಂಗಳ 27 ಮತ್ತು 28 ರಂದು ರಾಹುಲ್ ಗಾಂಧಿಯವರು ರಾಜ್ಯಕ್ಕೆ ಆಗಮಿಸಲಿದ್ದು, ಗದಕ, ಹಾವೇರಿ, ಉತ್ತರ ಕನ್ನಡ ಮತ್ತು ಮಡಿಕೇರಿಯಲ್ಲಿ ಚುನಾವಣೆ ಪ್ರಚಾರಗಲ್ಲಿ ಭಾಗವಹಿಸುತ್ತಾರೆಂದು ಇದೇ ವೇಳೆ ಪರಮೇಶ್ವರ್ ಅವರು ಹೇಳಿದ್ದಾರೆ. 

ರಾಹುಲ್ ರಾಜ್ಯಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ರೋಡ್ ಶೋ, ಸಾರ್ವಜನಿಕ ಸಭೆಗಳು ನಡೆಯಲಿವೆ. ಮತ್ತೆ ಮೇ. 3 ಮತ್ತು 4, 7 ರಿಂದ 10 ರಂದು ಮತ್ತೆ ರಾಹುಲ್ ರಾಜ್ಯಕ್ಕೆ ಬರಲಿದ್ದಾರೆಂದಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com