ದಕ್ಷಿಣ ಕನ್ನಡ ಯುವ ಕಾಂಗ್ರೆಸ್ ಪದಾಧಿಕಾರಿಗಳ ಸಾಮೂಹಿಕ ರಾಜೀನಾಮೆ
ರಾಜಕೀಯ
ಮಿಥುನ್ ರೈಗೆ ಟಿಕೆಟ್ ಸಿಕ್ಕದ ಹಿನ್ನೆಲೆ: ದಕ್ಷಿಣ ಕನ್ನಡ ಯುವ ಕಾಂಗ್ರೆಸ್ ಪದಾಧಿಕಾರಿಗಳ ರಾಜೀನಾಮೆ
ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ ಅವರಿಗೆ ಟಿಕೆಟ್ ದೊರೆಯದ ಕಾರಣ ಬೇಸತ್ತ ಜಿಲ್ಲಾ ಯುವ ಕಾಂಗ್ರೆಸ್ ಪದಾಧಿಕಾರಿಗಳು ಎಲ್ಲ ಎಂಟು...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ ಅವರಿಗೆ ಟಿಕೆಟ್ ದೊರೆಯದ ಕಾರಣ ಬೇಸತ್ತ ಜಿಲ್ಲಾ ಯುವ ಕಾಂಗ್ರೆಸ್ ಪದಾಧಿಕಾರಿಗಳು ಎಲ್ಲ ಎಂಟು ವಿಧಾನಸಭೆ ಕ್ಷೇತ್ರದ ಅಧ್ಯಕ್ಷರು ಸಾಮೂಹಿಕ ರಾಜೀನಾಮೆ ನಿಡಿದ್ದಾರೆ.
ಮಿಥುನ್ ರೈ ಮೂಡುಬಿದಿರೆ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಟಿಕೆಟ್ ಆಕಾಂಕ್ಷಿಯಾಗಿದ್ದರು.
ಮಂಗಳವಾರ ನಡೆದ ಕಾಂಗ್ರೆಸ್ ಸಮಿತಿ ಸಭೆಯ ನಂತರ ಪದಾಧಿಕಾರಿಗಳು ರಾಜೀನಾಮೆ ನೀಡಿದ್ದಾರೆ. ಅಧ್ಯಕ್ಷ ಮಿಥುನ್ ರೈ ಅನುಪಸ್ಥಿತಿಯಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ಅವರಿಗೆ ರಾಜೀನಾಮೆ ಸಲ್ಲಿಸಿರುವುದಾಗಿ ಅವರು ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದಾರೆ.
"ಯುವ ಕಾಂಗ್ರೆಸ್ ನಾಯಕರಿಗೆ ಅವಕಾಶ ನಿಡುತ್ತೇವೆಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಭರವಸೆ ನೀಡಿದ್ದರು. ಶಾಸಕ ಅಭಯಚಂದ್ರ ಜೈನ್ ಸಹ ಮಿಥುನ್ ಅವರಿಗೆ ಸ್ಥಾನ ಬಿಟ್ಟುಕೊಡಲು ಒಪ್ಪಿದ್ದರು. ಆದರೆ ಕಡೆ ಕ್ಷಣದಲ್ಲಿ ಹೈಕಮಾಂಡ್ ಮಿಥುನ್ ಸ್ಪರ್ಧೆಗೆ ನಿರಾಕರಿಸಿದೆ. ನಮಗೆ ಅತೀವ ಬೇಸರವಾಗಿದೆ. ಹೀಗಾಗಿ ನಾವು ರಾಜೀನಾಮೆ ಸಲ್ಲಿಸಿದ್ದೇವೆ"
"ನಾವು ಪಕ್ಷದ ಸಿದ್ದಾಂತಕ್ಕೆ ಬದ್ದರಾಗಿದ್ದೇವೆ. ಸಿದ್ದರಾಮಯ್ಯನವರ ಸರ್ಕಾರದ ಆಡಳಿತದಲ್ಲಿ ಕರ್ನಾಟಕ ಸುಭಿಕ್ಷವಾಗಿದ್ದು ಉಸ್ತುವಾರಿ ಸಚಿವ ಬಿ.ರಮಾನಾಥ ರೈ, ಆಹಾರ ಸಚಿವ ಯು.ಟಿ.ಖಾದರ್ ಉತ್ತಮ ನಾಯಕರಾಗಿದ್ದಾರೆ ಮಿಥುನ್ ರೈಯುವಜನರನ್ನು ಮುನ್ನಡೆಸುವ ಸಮರ್ಥ ನಾಯಕರಿದ್ದಾರೆ" ಎಂದಿದ್ದಾರೆ.
"ನಾವೀಗ ತಟಸ್ಥರಾಗಿರಲು ಬಯಸಿದ್ದೇವೆ.ಮಿಥುನ್ ರೈ ಅವರ ಭೇಟಿಯಾಗಿಲ್ಲ. ಅವರೊಡನೆ ಚರ್ಚಿಸಿ ಮುಂದಿನ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ."ಯುವ ಕಾಂಗ್ರೆಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಸುಹೈಲ್ ಕಂದಕ್ ಹೇಳಿದ್ದಾರೆ.
"ನಾವು ಕಾಂಗ್ರೆಸ್ ತೊರೆಯುವ ಪ್ರಶ್ನೆ ಇಲ್ಲ. ಹೈಕಮಾಂಡ್ ಅಥವಾ ರಾಜ್ಯದ ಯಾವ ನಾಯಕರ ವಿರುದ್ಧ ನಮಗೆ ಭಿನ್ನಾಭಿಪ್ರಾಯವಿಲ್ಲ. ನಮ್ಮ ನಾಯಕನಿಗೆ ಟಿಕೆಟ್ ಸಿಕ್ಕಿಲ್ಲ ಎಂದಷ್ಟೇ ನಮ್ಮ ಆಕ್ಷೇಪವಾಗಿದೆ. " ಅವರು ಹೇಳಿದ್ದಾರೆ.

