ಮಾಧ್ಯಮಗಳು ವರದಿ ಮಾಡಿರುವಂತೆ ಮೈಸೂರಿನ ಕೆ.ಆರ್. ನಗರದ ಜೆಡಿಎಸ್ ಅಭ್ಯರ್ಥಿ ಸಾ.ರಾ ಮಹೇಶ್ ಅವರನ್ನ ಸೋಲಿಸಲು ದೇವೇಗೌಡರ ಸೊಸೆ ಭವಾನಿ ರೇವಣ್ಣ ಅವರೇ ಮುಂದಾಗಿದ್ದಾರೆ ಎಂದು ಹೇಳಲಾಗಿದೆ. ಈ ಕುರಿತ ವಿಡಿಯೋ ಒಂದು ಇದೀಗ ವ್ಯಾಪಕ ವೈರಲ್ ಆಗುತ್ತಿದ್ದು, ಇಂದು ಸಾಲಿಗ್ರಾಮದ ಒಕ್ಕಲಿಗ ಮುಖಂಡರ ಜೊತೆ ಭವಾನಿ ರೇವಣ್ಣ ನಡೆಸಿದ ಗೌಪ್ಯ ಸಭೆಯಲ್ಲಿ ಸಾ.ರಾ.ಮಹೇಶ್ ಸೋಲಿಗೆ ತನ್ನದೇ ಹೆಸರು ಬಳಸಿಕೊಳ್ಳಿ ಅಂತ ಭವಾನಿ ರೇವಣ್ಣ ತನ್ನ ಬೆಂಬಲಿಗರಿಗೆ ಹೇಳಿದ್ದಾರೆ ಎನ್ನಲಾಗಿದೆ.