ರಾಜ್ಯ ವಿಧಾನಸಭೆ ಚುನಾವಣೆ: ಮತದಾನದ ಅವಧಿ 1 ಗಂಟೆ ಹೆಚ್ಚಳ

ಚುನಾವಣಾ ಆಯೋಗ ಮೇ 12ರಂದು ನಡೆಯಲಿರುವ ರಾಜ್ಯ ವಿಧಾನಸಭಾ ಚುನಾವಣೆಯ ಮತದಾನದ ಅವಧಿಯನ್ನ....
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on: 
ಬೆಂಗಳೂರು: ಚುನಾವಣಾ ಆಯೋಗ ಮೇ 12ರಂದು ನಡೆಯಲಿರುವ ರಾಜ್ಯ ವಿಧಾನಸಭಾ ಚುನಾವಣೆಯ ಮತದಾನದ ಅವಧಿಯನ್ನು ಒಂದು ಗಂಟೆ ಹೆಚ್ಚಿಸಿದೆ. 
ಈ ಸಂಬಂಧ ಇಂದು ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಮುಖ್ಯ ಚುನಾವಣಾಧಿಕಾರಿ ಸಂಜೀವ್‌ ಕುಮಾರ್‌ ಅವರು, ಮತದಾನದ ಅವಧಿಯನ್ನು ಒಂದು ಗಂಟೆ ಹೆಚ್ಚಿಸಲಾಗಿದ್ದು,  ಬೆಳಗ್ಗೆ 7 ಕ್ಕೆ ಆರಂಭವಾಗಿ ಸಂಜೆ 6 ಗಂಟೆಯವರೆಗೆ ಮತದಾನಕ್ಕೆ ಅವಕಾಶ ನೀಡಲಾಗಿದೆ ಎಂದರು.
ಮೇ ತಿಂಗಳಲ್ಲಿ ಬೇಸಿಗೆಯ ಧಗೆ ಮತ್ತಷ್ಟು ಹೆಚ್ಚುವುದರಿಂದ ಹಾಗೂ ಎಲ್ಲ ಮತಗಟ್ಟೆಗಳಲ್ಲೂ ವಿವಿಪ್ಯಾಟ್‌ ಅಳವಡಿಸುತ್ತಿರುವ ಕಾರಣ ಈ ನಿರ್ಣಯ ತೆಗೆದುಕೊಳ್ಳಲಾಗಿದೆ. ಅವಧಿ ಹೆಚ್ಚಿಸುವ ಸಂಬಂಧ ಕೇಂದ್ರ ಚುನಾವಣಾ ಆಯೋಗಕ್ಕೆ ಪ್ರಸ್ತಾವನೆ ಕಳುಹಿಸಿದ್ದೆವು. ಅದಕ್ಕೆ ಒಪ್ಪಿಗೆ ನೀಡಿದೆ ಎಂದು ಅವರು ತಿಳಿಸಿದರು.
ಈಗಾಗಲೇ ಮತದಾನದ ಕುರಿತು ಜನರಲ್ಲಿ ಜಾಗೃತಿ ಮೂಡಿಸಲು ಹಲವು ಕಾರ್ಯಕ್ರಮಗಳನ್ನೂ ಹಮ್ಮಿಕೊಳ್ಳಲಾಗಿದೆ ಎಂದು ಅವರು ತಿಳಿಸಿದರಲ್ಲದೆ, ಈ ಬಾರಿ ಹೆಚ್ಚಿನ ಪ್ರಮಾಣದಲ್ಲಿ ಮತ ಚಲಾವಣೆ ಆಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com