ಬಾದಾಮಿ ಕ್ಷೇತ್ರದ ಮೇಲೂ ಸಿಎಂ ಕಣ್ಣು, ಹೈಕಮಾಂಡ್ ನಿರ್ಧಾರಕ್ಕೆ ಬದ್ಧ: ಸಿಎಂ ಸಿದ್ದರಾಮಯ್ಯ ಹೇಳಿಕೆ

ಮೇ 12 ರಂದು ನಡೆಯಲಿರುವ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರಿನ ಚಾಮುಂಡೇಶ್ವರಿ ಹಾಗೂ ಬಾದಾಮಿ ವಿಧಾನಸಭಾ ಕ್ಷೇತ್ರಗಳಿಂದ ಸ್ಪರ್ಧಿಸುವ ಬಗ್ಗೆ ಸುಳಿವು ನೀಡಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ
ಮುಖ್ಯಮಂತ್ರಿ ಸಿದ್ದರಾಮಯ್ಯ

ಮೈಸೂರು: ಮೇ 12 ರಂದು ನಡೆಯಲಿರುವ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ  ಮೈಸೂರಿನ ಚಾಮುಂಡೇಶ್ವರಿ ಹಾಗೂ ಬಾದಾಮಿ ವಿಧಾನಸಭಾ ಕ್ಷೇತ್ರಗಳಿಂದ ಸ್ಪರ್ಧಿಸುವ ಬಗ್ಗೆ ಸುಳಿವು ನೀಡಿದ್ದಾರೆ.

 ಬಾದಾಮಿಯಿಂದ ಮೈಸೂರಿಗೆ ಆಗಮಿಸಿದ್ದ ಪಕ್ಷದ ಕಾರ್ಯಕರ್ತರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯಸ ಅಲ್ಲಿಗೆ ಬರುವುದಾಗಿ ಹೇಳುವ ಮೂಲಕ ಅಲ್ಲಿಂದಲೂ ಸ್ಪರ್ಧಿಸುವ ಬಗ್ಗೆ ಸುಳಿವು ನೀಡಿದರು.

ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಬಿಜೆಪಿಯಿಂದ ಪ್ರಬಲ ಪೈಪೋಟಿ  ಎದುರಾಗುವ ಸಾಧ್ಯತೆ ಇದ್ದು, ಅವರಿಗೆ ಬಾದಾಮಿ ಸುರಕ್ಷಿತ ಕ್ಷೇತ್ರ ಎಂದು ಪರಿಗಣಿಸಲಾಗಿದೆ.ಈ ವಿಚಾರದಲ್ಲಿ ಹೈಕಮಾಂಡ್  ತೆಗೆದುಕೊಳ್ಳುವ ನಿರ್ಧಾರಕ್ಕೆ ವಿಧೇಯನಾಗಿರುವುದಾಗಿ ತಿಳಿಸಿದರು.

 ಎಐಸಿಸಿ ಅಧ್ಯಕ್ಷ ಅಮೇಥಿಯಿಂದ ನವದೆಹಲಿಗೆ ಆಗಮಿಸಿದ ನಂತರ ಈ ಬಗ್ಗೆ ನಿರ್ಧಾರ ಪ್ರಕಟಿಸುವ ಸಾಧ್ಯತೆ ಇದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

 ಈ ಸಂಬಂಧ ಎಐಸಿಸಿ ಪ್ರಧಾನ ಕಾರ್ಯದರ್ಶಿ , ರಾಜ್ಯ ಉಸ್ತುವಾರಿ ಕೆ. ಸಿ. ವೇಣುಗೋಪಾಲ್  ಜೊತೆ ಸಿದ್ದರಾಮಯ್ಯ ಮೈಸೂರಿನಲ್ಲಿ ನಿನ್ನೆ ಮಾತುಕತೆ ನಡೆಸಿದ್ದಾರೆ. ಬಾದಾಮಿ ಶಾಸಕ ಬಿಬಿ ಚಿಮ್ಮನಕಟ್ಟಿ ಸಹ  ಮಾತುಕತೆಯಲ್ಲಿ ಪಾಲ್ಗೊಂಡಿದ್ದರು ಎಂದು ಮೂಲಗಳಿಂದ ತಿಳಿದುಬಂದಿದೆ.



ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com