ಹಿಂದೂ v/s ಮುಸ್ಲಿಂ ಹೇಳಿಕೆ: ಸಂಜಯ್ ಪಾಟೀಲ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಯೋಗಕ್ಕೆ ಕಾಂಗ್ರೆಸ್ ಆಗ್ರಹ

ಪ್ರಚೋದನಾಕಾರಿಯಾಗಿ ಹೇಳಿಕೆ ನೀಡಿದ್ದ ಬಿಜೆಪಿ ಶಾಸಕ ಸಂಜಯ್ ಪಾಟೀಲ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಚುನಾವಣಾ ಆಯೋಗಕ್ಕೆ ಕಾಂಗ್ರೆಸ್ ಆಗ್ರಹಿಸಿದೆ...
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
ಬೆಂಗಳೂರು: ಪ್ರಚೋದನಾಕಾರಿಯಾಗಿ ಹೇಳಿಕೆ ನೀಡಿದ್ದ ಬಿಜೆಪಿ ಶಾಸಕ ಸಂಜಯ್ ಪಾಟೀಲ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಚುನಾವಣಾ ಆಯೋಗಕ್ಕೆ ಕಾಂಗ್ರೆಸ್ ಆಗ್ರಹಿಸಿದೆ. 
ಏ.17 ರಂದು ಸಾರ್ವಜನಿಕ ರ್ಯಾಲಿಯಲ್ಲಿ ಮಾತನಾಡಿದ್ದ ಸಂಜಯ್ ಪಾಟೀಲ್ ಅವರು, ಈ ಬಾರಿಯ ಚುನಾವಣೆ ರಸ್ತೆ, ಗಟಾರ, ನೀರಿಗಾಗಿ ಅಲ್ಲ.ಹಿಂದೂ-ಮುಸ್ಲಿಂ ಚುನಾವಣೆಯಾಗಿದೆ. ಯಾರಿಗೆ ಬಾಬ್ರಿ ಮಸೀದಿ ಕಟ್ಟಬೇಕಿದೆಯೋ ಅವರು ಕಾಂಗ್ರೆಸ್‌ಗೆ ಮತ ಹಾಕಿ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದರು.
ಸಂಜಯ್ ಪಾಟೀಲ್ ಅವರ ಹೇಳಿಕೆ ಸಂಬಂಧ ಕಾಂಗ್ರೆಸ್ ಚುನಾವಣಾ ಆಯೋಗಕ್ಕೆ ಪತ್ರ ಬರೆದಿದ್ದು, ಬಿಜೆಪಿ ನಾಯಕ ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದು, ಕೂಡಲೇ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದೆ ಎಂದು ತಿಳಿದುಬಂದಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com