ಬಿಜೆಪಿಯ 3ನೇ ಪಟ್ಟಿಯಲ್ಲಿ ಬಾದಾಮಿ, ವರುಣಾ ಕ್ಷೇತ್ರಗಳ ಘೋಷಣೆ ಬಾಕಿ; ಕುತೂಹಲ ಸೃಷ್ಟಿ

ವಿಧಾನಸಭೆ ಚುನಾವಣೆಗೆ ಬಿಜೆಪಿಯ 59 ಸ್ಪರ್ಧಿಗಳ ಮೂರನೇ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ವಿಧಾನಸಭೆ ಚುನಾವಣೆಗೆ ಬಿಜೆಪಿಯ 59 ಸ್ಪರ್ಧಿಗಳ ಮೂರನೇ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಅದರಲ್ಲಿ ಬಹು ಪ್ರಚಾರ ಪಡೆದಿರುವ ಬಾದಾಮಿ ಮತ್ತು ವರುಣಾ ಕ್ಷೇತ್ರಗಳಿಗೆ ಸ್ಪರ್ಧಿಗಳ ಅಭ್ಯರ್ಥಿಗಳ ಹೆಸರನ್ನು ಇನ್ನೂ ಘೋಷಣೆ ಮಾಡಿಲ್ಲ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರ ಪುತ್ರ ವಿಜಯೇಂದ್ರ ವರುಣಾ ಕ್ಷೇತ್ರದಲ್ಲಿ ಸ್ಪರ್ಧಿಸುವ ಸಾಧ್ಯತೆಯಿದೆ. ಇನ್ನು ಬಾದಾಮಿ ಕ್ಷೇತ್ರದಲ್ಲಿ ಕಾಂಗ್ರೆಸ್ ನಿಂದ ಸಿದ್ದರಾಮಯ್ಯನವರು ಸ್ಪರ್ಧಿಸುತ್ತಾರೆಯೇ ಇಲ್ಲವೇ ಎಂದು ನೋಡಿಕೊಂಡು ಸೂಕ್ತ ಅಭ್ಯರ್ಥಿಯನ್ನು ಕಣಕ್ಕಿಳಿಸುವ ನಿರ್ಧಾರವನ್ನು ಬಿಜೆಪಿ ಮಾಡಿದೆ.

ಚಾಮುಂಡೇಶ್ವರಿಯಲ್ಲಿ ಬಿಜೆಪಿ ಗೋಪಾಲ್ ರಾವ್ ಅವರನ್ನು ಕಣಕ್ಕಿಳಿಸಿದೆ. ಆರ್ ಎಸ್ಎಸ್ ಜೊತೆಗೆ ಜನಸಂಘ ದಿನಗಳಿಂದ ಗುರುತಿಸಿಕೊಂಡಿರುವ ಗೋಪಾಲ್ ರಾವ್ ಚಾಮುಂಡೇಶ್ವರಿ ಬಿಜೆಪಿ ಘಟಕದ ಅಧ್ಯಕ್ಷರಾಗಿ ಎರಡು ಬಾರಿಗೆ ಸೇವೆ ಸಲ್ಲಿಸಿದ್ದಾರೆ. ಮತ್ತು ಬಿಜೆಪಿಯ ಮೈಸೂರು ಜಿಲ್ಲಾ ಗ್ರಾಮೀಣ ಘಟಕದ ಕಾರ್ಯದರ್ಶಿ ಕೂಡ ಆಗಿದ್ದಾರೆ.

ಆದರೆ ಮೂಲಗಳಿಂದ ಸಿಕ್ಕಿರುವ ಮಾಹಿತಿ ಪ್ರಕಾರ, ಗೋಪಾಲ್ ರಾವ್ ಗೆ ಗೆಲ್ಲುವ ಅವಕಾಶಗಳು ಕಡಿಮೆಯಿದ್ದು ಜೆಡಿಎಸ್ ನ ಜಿಟಿ ದೇವೇಗೌಡ ಅವರಿಗೆ ಗೆಲ್ಲಲು ಸಹಾಯ ಮಾಡಲು ಅವರನ್ನು ಕಣಕ್ಕಿಳಿಸಲಾಗಿದೆ ಎನ್ನಲಾಗುತ್ತಿದೆ. ನಾಯಕ ಜನಾಂಗದ ಪ್ರಮುಖ ನಾಯಕ ಎಂ.ಅಪ್ಪಣ್ಣ, ಇದೇ ಕ್ಷೇತ್ರದಿಂದ ಸ್ಪರ್ಧಿಸಿದ್ದು 40,000 ಮತಗಳನ್ನು ಪಡೆದಿದ್ದರು. ಅವರನ್ನು ಬಿಜೆಪಿಯಿಂದ ಕಣಕ್ಕಿಳಿಸಬಹುದಾಗಿತ್ತು ಎಂಬುದು ಹಲವರ ಅಭಿಪ್ರಾಯವಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com