ಮೊಳಕಾಲ್ಮುರು ಕ್ಷೇತ್ರದ ಹಾಲಿ ಶಾಸಕ ಎಸ್. ತಿಪ್ಪೇಸ್ವಾಮಿ ಅವರಿಗೆ ಟಿಕೆಟ್ ಕೈ ತಪ್ಪಿದ ಹಿನ್ನೆಲೆಯಲ್ಲಿ ವಾರದ ಹಿಂದೆ ಕಾರ್ಯರ್ತರ ನಡುವೆ ಸಂಘರ್ಷ ಉಂಟಾಗಿತ್ತು. ನಾಯಕನಹಟ್ಟಿಯಲ್ಲಿ ಪ್ರಚಾರ ಆರಂಭಿಸಲು ಬಂದಿದ್ದ ಶ್ರೀರಾಮುಲುಗೆ ತಿಪ್ಪೇಸ್ವಾಮಿ ಬೆಂಬಲಿಗರು ಘೇರಾವ್ ಹಾಕಿ, ಕಾರಿನ ಮೇಲೆ ಕಲ್ಲು, ಚಪ್ಪಲಿ ತೂರಿದ್ದರು.