ನಲಪಾಡ್ ಎಫೆಕ್ಟ್: ಶಾಂತಿನಗರ 'ಕೈ' ತಪ್ಪುವ ಬಗ್ಗೆ ಕಾಂಗ್ರೆಸ್ ಮುಖಂಡರಲ್ಲಿ ಆತಂಕ

ಹಾಲಿ ಶಾಸಕ ಎನ್ ಎ ಹ್ಯಾರಿಸ್ ಅವರಿಗೆ ಶಾಂತಿನಗರ ವಿಧಾನಸಭೆ ಕ್ಷೇತ್ರದ ಟಿಕೆಟ್ ನೀಡುವುದಕ್ಕೆ ಪಕ್ಷದ ಹಲವು ಮುಖಂಡರೇ ಆಕ್ಷೇಪ ವ್ಯಕ್ತ ಪಡಿಸಿದ್ದಾರೆ. ...
ಮೊಹಮದ್ ನಲಪಾಡ್ ಮತ್ತು ಎನ್ ಎ ಹ್ಯಾರಿಸ್
ಮೊಹಮದ್ ನಲಪಾಡ್ ಮತ್ತು ಎನ್ ಎ ಹ್ಯಾರಿಸ್
Updated on
ಬೆಂಗಳೂರು: ಹಾಲಿ ಶಾಸಕ ಎನ್ ಎ ಹ್ಯಾರಿಸ್ ಅವರಿಗೆ ಶಾಂತಿನಗರ ವಿಧಾನಸಭೆ ಕ್ಷೇತ್ರದ ಟಿಕೆಟ್ ನೀಡುವುದಕ್ಕೆ ಪಕ್ಷದ ಹಲವು ಮುಖಂಡರೇ ಆಕ್ಷೇಪ ವ್ಯಕ್ತ ಪಡಿಸಿದ್ದಾರೆ. ಹ್ಯಾರಿಸ್ ಅವರಿಗೆ ಟಿಕೆಟ್ ನೀಡುವುದರಿಂದ ಶಾಂತಿನಗರದಲ್ಲಿ ಗೆಲ್ಲಲು ಯಾವುದೇ ಪರಿಣಾಮ ಆಗುವುದಿಲ್ಲ ಎಂದು ಕೆಲ ಕಾಂಗ್ರೆಸ್ ಮುಖಂಡರು ಅಭಿಪ್ರಾಯ ಪಟ್ಟಿದ್ದಾರೆ.
ಆದರೆ ವಿರೋಧ ಪಕ್ಷಗಳಾದ ಕಾಂಗ್ರೆಸ್ ಮತ್ತು ಜೆಡಿಎಸ್ ಶಾಂತಿನಗರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಹ್ಯಾರಿಸ್ ಸೋಲುತ್ತಾರೆ ಎಂದು ಹೇಳಿದೆ. ಫೆಬ್ರವರಿ ತಿಂಗಳಿನಲ್ಲಿ ಫರ್ಜಿ ಕೆಫೆಯಲ್ಲಿ ಹ್ಯಾರಿಸ್ ಪುತ್ರ ಮೊಹಮದ್ ನಲಪಾಡ್ ನಡೆಸಿದ ಹಲ್ಲೆ ಪ್ರಕರಣ ಶಾಂತಿನಗರ ವಿಧಾನಸಭೆ ಚುನಾವಣೆ ಮೇಲೆ ಪರಿಣಾಮ ಬೀರಲಿದೆ ಎಂದು ವಿಶ್ಲೇಷಿಸಲಾಗಿದೆ.
ಯೂತ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಸ್ಥಾನದಿಂದ ನಲಪಾಡ್ ನನ್ನು 6 ವರ್ಷಗಳ ಕಾಲ ಕೆಪಿಸಿಸಿ ಉಚ್ಚಾಟಿಸಿದೆ, ಜಾಮೀನು ಸಿಗದೇ ನಲಪಾಡ್ ಸದ್ಯ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಕಂಬಿ ಎಣಿಸುತ್ತಿದ್ದಾರೆ,ಕಾಂಗ್ರೆಸ್ 218 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ.ಆದರೆ ಶಾಂತಿನಗರ ಸೇರಿದಂತೆ 6 ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿ ಇನ್ನಬ ರಿಲೀಸ್ ಮಾಡಿಲ್ಲ.
ಶಾಂತಿನಗರ ಕ್ಷೇತ್ರದಿಂದ ಸ್ಪರ್ದಿಸಲು ಹ್ಯಾರಿಸ್ ಅವರಿಗೆ ಟಿಕೆಟ್ ನೀಡಲಾಗುತ್ತದೆ ಎಂದು ಸಚಿವ ರಾಮಲಿಂಗಾ ರೆಡ್ಡಿ ತಿಳಿಸಿದ್ದಾರೆ. ಪಬ್ ದಾಳಿ ಪ್ರಕರಣ ಕಾಂಗ್ರೆಸ್ ಮೇಲೆ ನೆಗೆಟಿವ್ ಪರಿಣಾಮ ಬೀರುವುದಿಲ್ಲ ಎಂಬ ಭರವಸೆ ವ್ಯಕ್ತ ಪಡಿಸಿದ್ದಾರೆ, ನಮ್ಮ ಸರ್ಕಾರ ಕೂಡಲೇ ಕ್ರಮ ತೆಗೆದುಕೊಂಡಿದೆ, ನಾವು ಪಕ್ಷಪಾತ ಮಾಡುವುದಿಲ್ಲ, ಶಾಂತಿನಗರದಲ್ಲಿ ಮತ್ತೆ ನಾವು ಗೆಲುವು ಸಾಧಿಸುತ್ತೇವೆ ಎಂದು ರೆಡ್ಡಿ ವಿಶ್ವಾಸ ವ್ಯಕ್ತ ಪಡಿಸಿದ್ದಾರೆ.
ಹ್ಯಾರಿಸ್ ಅವರನ್ನು ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ಸಮರ್ಥಿಸಿಕೊಂಡಿದ್ದಾರೆ. ಈ ಪ್ರಕರಣದಲ್ಲಿ ಹ್ಯಾರಿಸ್ ಪುತ್ರ ಬಾಗಿಯಾಗಿದ್ದಾರೆ ಹೊರತು ಹ್ಯಾರಿಸ್ ಅಲ್ಲ, ಅವರ ಪುತ್ರ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎಂಬ ಕಾರಣಕ್ಕಾಗಿ ಹ್ಯಾರಿಸ್ ಅವರಿಗೆ ಟಿಕೆಟ್ ನಿರಾಕರಿಸಲು ಸಾಧ್ಯವಿಲ್ಲ, ಅದಕ್ಕೂ ಹೆಚ್ಚಾಗಿ ನಲಪಾಡ್ ಪೊಲೀಸ್ ವಶದಲ್ಲಿದ್ದಾನೆ ಎಂದು ಹೇಳಿದ್ದಾರೆ.
ಆದರೆ ಹ್ಯಾರಿಸ್ ಗೆ ಟಿಕೆಟ್ ನೀಡುವುದರ ಬಗ್ಗೆ ಹಲವು ಕಾಂಗ್ರೆಸ್ ಮುಖಂಡರು ತೀವ್ರ ಆಸಮಾಧಾನ ವ್ಯಕ್ತ ಪಡಿಸಿದ್ದಾರೆ. ಪ್ರಕರಣ ಇತ್ತೀಚೆಗೆ ನಡೆದಿದೆ, ಅದನ್ನು ಮಾಧ್ಯಮಗಳಲ್ಲಿ ಹಾಗೂ ಸೋಷಿಯಲ್ ಮೀಡಿಯಾದಲ್ಲಿ ಪ್ರಕಟವಾಗಿದೆ, ಈ ಪ್ರಕರಣ ಇನ್ನೂ ಸಾರ್ವಜನಿಕರ ಮನಸಲ್ಲಿ ಉಳಿದಿದೆ, ಯಾರನ್ನಾದರೂ ಜೈಲಿಗೆ ಕಳುಹಿಸುವುದು ಆಡಳಿತಾರೂಡ ಸರ್ಕಾರದ ಮೇಲೆ ಹೆಚ್ಚಿನ ಪರಿಣಾಮ ಬೀರುವುದಿಲ್ಲ, ಆದರೆ ಈ ಪ್ರಕರಣವನ್ನು ವಿರೋಧ ಪಕ್ಷಗದಳು ಪ್ರಚಾರ ಸಮಯದಲ್ಲಿ ಸದುಪಯೋಗ ಪಡಿಸಿಕೊಳ್ಳುತ್ತವೆ ಎಂದು ಹಿರಿಯ ಕಾಂಗ್ರೆಸ್ ಮುಖಂಡರೊಬ್ಬರು ಅಭಿಪ್ರಾಯ ಪಟ್ಟಿದ್ದಾರೆ.
ಶಾಂತಿನಗರ ಕ್ಷೇತ್ರದಿಂದ ಸ್ಪರ್ದಿಸಿದ್ದ ಹ್ಯಾರಿಸ್ ತಮ್ಮ ಅದೃಷ್ಟದಿಂದ ಆರಿಸಿ ಬಂದಿದ್ದರು, ಆದರೆ ಈ ಭಾರಿ  ಪಬ್ ಪ್ರಕರಣ ಅವರು ಗೆಲ್ಲಲು ಸಹಾಯ ಮಾಡುವುದಿಲ್ಲ ಎಂದು ಹೇಳಿದ್ದಾರೆ.
ಚುನಾವಣಾ ಪ್ರಚಾರದ ವೇಳೆ ಈ ಪ್ರಕರಣವನ್ನು ನಾವು ಜನರ ಮುಂದೆ ತರುತ್ತೇವೆ, ಕಾಂಗ್ರೆಸ್ ನ ನೆಗೆಟಿವ್ ಅಂಶಗಳೆಲ್ಲಾ ನಮಗೆ ಪಾಸಿಟಿವ್ ಆಗಲಿವೆ ಎಂದು ಬಿಬಿಎಂಪಿ ಕೌನ್ಸಿಲರ್  ಪದ್ಮನಾಭ ರೆಡ್ಡಿ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com