ನಾನು ಮಂಡ್ಯ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸುವುದಿಲ್ಲ: ರಮ್ಯಾ

ಮಂಡ್ಯ ವಿಧಾನಸಭಾ ಚುನಾವಣಾ ಕಣದಿಂದ ಸ್ಪರ್ಧಿಸಲು ಮಾಜಿ ಸಚಿವ ಅಂಬರೀಶ್ ಅವರು ಹಿಂದೇಟು ಹಾಕುತ್ತಿದ್ದು ಸದ್ಯ ಮಂಡ್ಯ ಕ್ಷೇತ್ರ ಕಾಂಗ್ರೆಸ್ ಗೆ ನುಂಗಲಾರದ...
ರಮ್ಯಾ
ರಮ್ಯಾ
Updated on: 
ಬೆಂಗಳೂರು: ಮಂಡ್ಯ ವಿಧಾನಸಭಾ ಚುನಾವಣಾ ಕಣದಿಂದ ಸ್ಪರ್ಧಿಸಲು ಮಾಜಿ ಸಚಿವ ಅಂಬರೀಶ್ ಅವರು ಹಿಂದೇಟು ಹಾಕುತ್ತಿದ್ದು ಸದ್ಯ ಮಂಡ್ಯ ಕ್ಷೇತ್ರ ಕಾಂಗ್ರೆಸ್ ಗೆ ನುಂಗಲಾರದ ತುತ್ತಾಗಿದೆ. ಅಂಬರೀಶ್ ಅವರ ಮನವೊಲಿಕೆಗೆ ಕಾಂಗ್ರೆಸ್ ನ ಹಿರಿಯ ಮುಖಂಡರು ಶತ ಪ್ರಯತ್ನ ನಡೆಸುತ್ತಿದ್ದಾರೆ. 
ಇನ್ನು ಮಂಡ್ಯ ಕ್ಷೇತ್ರದಿಂದ ತಾನು ಸ್ಪರ್ಧಿಸುವುದಿಲ್ಲ ಎಂದು ನಟಿ, ಎಐಸಿಸಿ ಸಾಮಾಜಿಕ ಜಾಲತಾಣ ವಿಭಾಗದ ಮುಖ್ಯಸ್ಥೆ ಹಾಗೂ ಮಾಜಿ ಸಂಸದೆ ರಮ್ಯಾ ಟ್ವೀಟರ್ ನಲ್ಲಿ ಸ್ಪಷ್ಟನೆ ನೀಡುತ್ತಿದ್ದಾರೆ. 
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂಪುಟ ಸಭೆಯಿಂದ ತಮ್ಮನ್ನು ಕೈಬಿಟ್ಟಿದ್ದರಿಂದ ಮನನೊಂದಿದ್ದ ಅಂಬರೀಶ್ ಅವರು ಈ ಬಾರಿ ಚುನಾವಣೆಯಿಂದ ಸ್ಪರ್ಧಿಸುವುದಿಲ್ಲ ಎಂದು ಹೇಳುವ ಮೂಲಕ ಕಾಂಗ್ರೆಸ್ ಗೆ ದೊಡ್ಡ ಹೊಡೆತ ನೀಡಿದ್ದಾರೆ.
ಅಂಬರೀಶ್ ಅವರು ಚುನಾವಣಾ ಕಣದಿಂದ ಹಿಂದೆ ಸರಿಯುತ್ತಿದ್ದಾರೆ ಎಂಬ ವದಂತಿ ಹರಡಿದ್ದು ಈ ಮಧ್ಯೆ ಅಂಬರೀಶ್ ಅವರ ಬದಲಿಗೆ ರಮ್ಯಾ ಮಂಡ್ಯ ಕ್ಷೇತ್ರದಿಂದ ಸ್ಪರ್ಧಿಸುತ್ತಾರೆ ಎಂದು ಹೇಳಲಾಗಿತ್ತು. ಈ ಹಿನ್ನೆಲೆಯಲ್ಲಿ ಸ್ಪಷ್ಟನೆ ನೀಡಿರುವ ರಮ್ಯಾ ಅವರು ನಾನು ಮಂಡ್ಯ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸುವುದಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com