ಉಡುಪಿ: ಉಮೇದುವಾರಿಕೆ ಸಲ್ಲಿಸಿದ ಶಿರೂರು ಸ್ವಾಮೀಜಿ, ಗೆದ್ದರೆ ಮೋದಿಗೆ ಬೆಂಬಲ!

ಉಡುಪಿ ವಿಧಾನಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಶಿರೂರು ಮಠದ ಲಕ್ಷ್ಮೀವರ ತೀರ್ಥ ಶ್ರೀಗಳು ಉಮೇದುವಾರಿಕೆ ಸಲ್ಲಿಸಿದ್ದು ಚುನಾವಣೆಯಲ್ಲಿ ತಾವು ಗೆದ್ದರೆ...
ಲಕ್ಷ್ಮೀವರ್ ತೀರ್ಥ ಸ್ವಾಮೀಜಿ
ಲಕ್ಷ್ಮೀವರ್ ತೀರ್ಥ ಸ್ವಾಮೀಜಿ
Updated on: 
ಉಡುಪಿ: ಉಡುಪಿ ವಿಧಾನಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಶಿರೂರು ಮಠದ ಲಕ್ಷ್ಮೀವರ ತೀರ್ಥ ಶ್ರೀಗಳು ಉಮೇದುವಾರಿಕೆ ಸಲ್ಲಿಸಿದ್ದು ಚುನಾವಣೆಯಲ್ಲಿ ತಾವು ಗೆದ್ದರೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಬೆಂಬಲಿಸುವುದಾಗಿ ಹೇಳಿದ್ದಾರೆ. 
ಉಡುಪಿ ಚುನಾವಣಾ ಕಣದಿಂದ ಶಿರೂರು ಸ್ವಾಮೀಜಿಗಳು ಅಖಾಡಕ್ಕೆ ಇಳಿದಿರುವುದರಿಂದ ಈ ಬಾರಿ ಚುನಾವಣಾ ಕಣ ರಂಗೇರಿದೆ. ಶ್ರೀಗಳು ಕಡಿಯಾಳಿಯ ಮಹಿಷಮರ್ದಿನಿ ದೇವಸ್ಥಾನಕ್ಕೆ ಭೇಟಿ ಕೊಟ್ಟು ವಿಶೇಷದ ಪೂಜೆ ಸಲ್ಲಿಸಿದ ನಂತರ ಮಧ್ಯಾಹ್ನ 12 ಗಂಟೆ ಸುಮಾರಿಗೆ ತಾಲೂಕು ಕಚೇರಿಗೆ ಆಗಮಿಸಿದ ಶ್ರೀಗಳು ಚುನಾವಣಾಧಿಕಾರಿಗಳಿಗೆ ನಾಮಪತ್ರ ಸಲ್ಲಿಸಿದರು. 
ಚುನಾವಣೆಯಲ್ಲಿ ಗೆಲ್ಲುವ ವಿಶ್ವಾಸವಿದೆ. ಈಗಾಗಲೇ ಪ್ರಚಾರ ಶುರು ಮಾಡಿದ್ದು ಯಾವುದೇ ಕಾರಣಕ್ಕೂ ನಾಮಪತ್ರ ಹಿಂಪಡೆಯುವುದಿಲ್ಲ. ಒಂದು ವೇಳೆ ಮೋದಿ ಅಥವಾ ಅಮಿತ್ ಶಾ ಮನವೊಲಿಸಿದರೆ ಈ ಕುರಿತು ಚಿಂತನೆ ನಡೆಸುತ್ತೇನೆ. ಪಕ್ಷೇತರನಾಗಿ ಗೆದ್ದರೆ ಪ್ರಧಾನಿ ಮೋದಿ ಅವರನ್ನು ಬೆಂಬಲಿಸುವುದಾಗಿ ಸ್ವಾಮೀಜಿ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com