ಬಿಜೆಪಿ ಮುಖಂಡ ಬೇಳೂರು ಗೋಪಾಲ ಕೃಷ್ಣ ಕಾಂಗ್ರೆಸ್ ಸೇರ್ಪಡೆ

ಶಿವಮೊಗ್ಗ ಜಿಲ್ಲೆ ಸಾಗರ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ದೊರೆಯದ ಹಿನ್ನೆಲೆಯಲ್ಲಿ ಅಸಮಾಧಾನಗೊಂಡಿದ್ದ ಬೇಳೂರು ಗೋಪಾಲಕೃಷ್ಣ ಬಿಜೆಪಿ ತೊರೆದು ಇಂದು ಕಾಂಗ್ರೆಸ್ ಸೇರ್ಪಡೆಯಾದರು.
ಬೇಳೂರು ಗೋಪಾಲಕೃಷ್ಣ ಕಾಂಗ್ರೆಸ್ ಸೇರ್ಪಡೆಯಾದ ಚಿತ್ರ
ಬೇಳೂರು ಗೋಪಾಲಕೃಷ್ಣ ಕಾಂಗ್ರೆಸ್ ಸೇರ್ಪಡೆಯಾದ ಚಿತ್ರ

ಬೆಂಗಳೂರು : ಶಿವಮೊಗ್ಗ ಜಿಲ್ಲೆ ಸಾಗರ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ದೊರೆಯದ ಹಿನ್ನೆಲೆಯಲ್ಲಿ ಅಸಮಾಧಾನಗೊಂಡಿದ್ದ  ಬೇಳೂರು ಗೋಪಾಲಕೃಷ್ಣ ಬಿಜೆಪಿ ತೊರೆದು ಇಂದು ಕಾಂಗ್ರೆಸ್ ಸೇರ್ಪಡೆಯಾದರು.

ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿಂದು ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ , ಪಕ್ಷದ ಧ್ವಜ ನೀಡಿ ಬೇಳೂರು ಗೋಪಾಲಕೃಷ್ಣ ಅವರನ್ನು ಬರಮಾಡಿಕೊಂಡರು.  ಎಐಸಿಸಿ ಕಾರ್ಯದರ್ಶಿ  ಬಿ. ಕೆ. ಹರಿಪ್ರಸಾದ್ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಬಳಿಕ ಮಾತನಾಡಿದ ದಿನೇಶ್ ಗುಂಡೂರಾವ್,  ಸಾಗರ ಕ್ಷೇತ್ರದಿಂದ ಎರಡು ಬಾರಿ ಶಾಸಕರಾಗಿದ್ದ  ಬೇಳೂರು ಗೋಪಾಲಕೃಷ್ಣ ಅವರ ಸೇರ್ಪಡೆಯಿಂದಾಗಿ ಶಿವಮೊಗ್ಗ, ಮಂಗಳೂರು , ಮತ್ತಿತರ ಜಿಲ್ಲೆಗಳಲ್ಲಿ ಕಾಂಗ್ರೆಸ್ ಗೆ ಮತ್ತಷ್ಟು ಶಕ್ತಿ ಬಂದಂತಾಗಿದೆ ಎಂದು ಹೇಳಿದರು.

ಬೇಳೂರು ಗೋಪಾಲಕೃಷ್ಣ ಮಾತನಾಡಿ, ಬಿಜೆಪಿಯಲ್ಲಿ ನೋವನ್ನು ಅನುಭವಿಸಿ ಯಾವುದೇ ಷರತ್ತು ಇಲ್ಲದೆ ಕಾಂಗ್ರೆಸ್ ಸೇರ್ಪಡೆಯಾಗಿದ್ದಾನೆ ಎಂದು ತಿಳಿಸಿದರು.

 ಕಾಗೋಡು ತಿಮ್ಮಪ್ಪ ಹಾಗೂ ತಮ್ಮ ನಡುವೆ ಯಾವುದೇ ಭಿನ್ನಾಭಿಪ್ರಾಯವಿಲ್ಲಾ, ಅವರನ್ನು ಸಂಪೂರ್ಣವಾಗಿ ಬೆಂಬಲಿಸುತ್ತೇನೆ , ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸುವುದಾಗಿ ಬೇಳೂರು ಗೋಪಾಲಕೃಷ್ಣ ಹೇಳಿದರು


ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com