ವಿಧಾನಸಭೆ ಚುನಾವಣೆ: ಬಿಜೆಪಿಯಿಂದ 40 ಸ್ಟಾರ್ ಪ್ರಚಾರಕರ ಪಟ್ಟಿ ಬಿಡುಗಡೆ

ಭಾರತೀಯ ಜನತಾ ಪಕ್ಷ(ಬಿಜೆಪಿ) ರಾಜ್ಯ ವಿಧಾನಸಭೆ ಚುನಾವಣೆ ಮತದಾರರನ್ನು ತನ್ನತ್ತ ಸೆಳೆಯಲು ಪಕ್ಷದ....
ಪ್ರಧಾನಿ ಮೋದಿ, ಬಿಜೆಪಿ ಅಧ್ಯಕ್ಷ ಅಮಿತ್ ಶಾ
ಪ್ರಧಾನಿ ಮೋದಿ, ಬಿಜೆಪಿ ಅಧ್ಯಕ್ಷ ಅಮಿತ್ ಶಾ
Updated on
ಬೆಂಗಳೂರು: ಭಾರತೀಯ ಜನತಾ ಪಕ್ಷ(ಬಿಜೆಪಿ) ರಾಜ್ಯ ವಿಧಾನಸಭೆ ಚುನಾವಣೆ ಮತದಾರರನ್ನು ತನ್ನತ್ತ ಸೆಳೆಯಲು ಪಕ್ಷದ 40 ಸ್ಟಾರ್ ಪ್ರಚಾರಕರ ಪಟ್ಟಿಯನ್ನು ಬಿಡುಗಡೆ ಮಾಡಿದೆ. 
ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮೊದಲ ಸ್ಥಾನ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ಅವರಿಗೆ ಎರಡನೇ ಸ್ಥಾನ ನೀಡಿದರೆ ಮುಖ್ಯಮಂತ್ರಿ ಅಭ್ಯರ್ಥಿ ಬಿಎಸ್ ಯಡಿಯೂರಪ್ಪ ಅವರಿಗೆ ಮೂರನೇ ಸ್ಥಾನ ನೀಡಲಾಗಿದೆ.
ಕೇಂದ್ರ ಸಚಿವರಾದ ರಾಜನಾಥ್ ಸಿಂಗ್, ಸುಷ್ಮಾ ಸ್ವರಾಜ್, ನಿತಿನ್ ಗಡ್ಕರಿ, ಡಿವಿ ಸದಾನಂದಗೌಡ, ಅನಂತ್ ಕುಮಾರ್, ನಿರ್ಮಲಾ ಸೀತಾರಾಮ್, ಪ್ರಕಾಶ್ ಜಾವಡೇಕರ್, ಪಿಯೂಶ್ ಗೋಯಲ್,  ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌, ಮಾಜಿ ಮುಖ್ಯಮಂತ್ರಿ ಎಸ್‌.ಎಂ.ಕೃಷ್ಣ, ಸಂಸದೆ ಹೇಮಾ ಮಾಲಿನಿ, ಶಾಸಕಿ ತಾರಾ, ಖುಷ್ಬೂ ಸೇರಿದಂತೆ ಪಕ್ಷದ ರಾಜ್ಯ ಮತ್ತು ರಾಷ್ಟ್ರೀಯ ಘಟಕಗಳ ಒಟ್ಟು 40 ನಾಯಕರನ್ನು ಪಕ್ಷದ ಸ್ಟಾರ್ ಪ್ರಚಾರಕರಾಗಿ ಬಿಜೆಪಿ ನೇಮಿಸಿದೆ. 

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com