ರಾಜಕೀಯ

ಬಾದಾಮಿಯಿಂದಲೂ ಸ್ಪರ್ಧಿಸುವಂತೆ ನನಗೆ ಪಕ್ಷ ಸೂಚಿಸಿದೆ: ಸಿಎಂ ಸಿದ್ದರಾಮಯ್ಯ

ಚಾಮುಂಡೇಶ್ವರಿ ಜೊತೆ ಬಾದಾಮಿ ಕ್ಷೇತ್ರದಿಂದಲೂ ಸ್ಪರ್ಧಿಸುವಂತೆ ನನಗೆ ಪಕ್ಷ ಸೂಚಿಸಿದೆ ಎಂದು ಮುಖ್ಯಮಂತ್ರಿ....

ಬಾದಾಮಿಯಿಂದಲೂ ಸ್ಪರ್ಧಿಸುವಂತೆ ನನಗೆ ಪಕ್ಷ ಸೂಚಿಸಿದೆ: ಸಿಎಂ ಸಿದ್ದರಾಮಯ್ಯ
ಸಿದ್ದರಾಮಯ್ಯ
Published On :
ಬೆಂಗಳೂರು: ಚಾಮುಂಡೇಶ್ವರಿ ಜೊತೆ ಬಾದಾಮಿ ಕ್ಷೇತ್ರದಿಂದಲೂ ಸ್ಪರ್ಧಿಸುವಂತೆ ನನಗೆ ಪಕ್ಷ ಸೂಚಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾನುವಾರ ಸ್ಪಷ್ಟಪಡಿಸಿದ್ದಾರೆ. 
ನಾನು ಚಾಮುಂಡೇಶ್ವರಿಯಿಂದ ಮಾತ್ರ ಸ್ಪರ್ಧಿಸಲು ನಿರ್ಧರಿಸಿದ್ದೆ. ಆದರೆ ಈಗ ಪಕ್ಷ ಮತ್ತು ಉತ್ತರ ಕರ್ನಾಟಕದ ಜನತೆಯ ಒತ್ತಡಕ್ಕೆ ಮಣಿದು ಬಾದಾಮಿಯಿಂದಲೂ ಸ್ಪರ್ಧಿಸುತ್ತಿದ್ದೇನೆ ಎಂದು ಸಿಎಂ ಟ್ವೀಟ್ ಮಾಡಿದ್ದಾರೆ.  
ಇದಕ್ಕು ಮುನ್ನ ಮೈಸೂರಿನಲ್ಲಿ, ಚಾಮುಂಡೇಶ್ವರಿಯಲ್ಲಿ ಸೋಲುವ ಭಯದಿಂದ ಬಾದಾಮಿಗೆ ಹೋಗುತ್ತಿದ್ದಾರೆ ಎಂಬ ಬಿಜೆಪಿ ಮತ್ತು ಜೆಡಿಎಸ್ ಹೇಳಿಕೆಗೆ ತಿರುಗೇಟು ನೀಡಿದ ಸಿಎಂ, ಸೋಲಿನ‌ ಭಯದಿಂದ ಕುಮಾರಸ್ವಾಮಿ‌ ಎರಡು‌ ಕಡೆ ನಿಲ್ಲುತ್ತಿದ್ದಾರಾ? ಮೋದಿ‌ ಸೋಲಿನ ಭಯದಿಂದ ಎರಡು ಕಡೆ ಸ್ಪರ್ಧೆ ಮಾಡಿದ್ರ?, ಜೆಡಿಎಸ್​ನವರಂತೆ ಕೀಳು ಮಟ್ಟದ ಟೀಕೆ ಮಾಡುವುದಿಲ್ಲ. ಬಾದಾಮಿಯಲ್ಲಿ ಯಾರೇ ಸ್ಪರ್ಧಿಸಿಲಿ ನನಗೆ ಯಾವ ಭಯವಿಲ್ಲ ಎಂದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.