ಬೆಂಗಳೂರು: ವಿಧಾನಸಭಾ ಚುನಾವಣೆಗೆ ಸ್ಪರ್ಧಿಸುವ ಬಿಜೆಪಿಯ ಅಭ್ಯರ್ಥಿಗಳ 4ನೇ ಪಟ್ಟಿ ಬಿಡುಗಡೆಯಾಗಿದ್ದು, ಯಶವಂತಪುರ ಸೇರಿದಂತೆ ಕುತೂಹಲ ಮೂಡಿಸಿದ್ದ ವಿಧಾನಸಭಾ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಆಯ್ಕೆ ಅಂತಿಮಗೊಂಡಿದೆ.
ಯಶವಂತಪುರದಿಂದ ನಟ ಜಗ್ಗೇಶ್, ಕನಕಪುರದಿಂದ ನಂದಿನಿ ಗೌಡ ಅವರನ್ನು ಆಯ್ಕೆ ಮಾಡಲಾಗಿದ್ದು ನಾಲ್ಕನೇ ಪಟ್ಟಿಯಲ್ಲಿ ಒಟ್ಟು ಏಳು ಮಂದಿಗೆ ಟಿಕೆಟ್ ಘೋಷಣೆ ಮಾಡಲಾಗಿದೆ.
ಬಿಜೆಪಿ ಮೊದಲ ಪಟ್ಟಿಯಲ್ಲಿ 72 ಅಭ್ಯರ್ಥಿ, ಎರಡನೇ ಪಟ್ಟಿಯಲ್ಲಿ 82 ಅಭ್ಯರ್ಥಿ, ಮೂರನೇ ಪಟ್ಟಿಯಲ್ಲಿ 60 ಅಭ್ಯರ್ಥಿ ಹಾಗೂ ನಾಲ್ಕನೇ ಪಟ್ಟಿಯಲ್ಲಿ 7 ಅಭ್ಯರ್ಥಿಗೆ ಟಿಕೆಟ್ ಘೋಷಣೆ ಮಾಡಿದೆ.
ಇನ್ನು ವರುಣ ಸೇರಿದಂತೆ 3 ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆ ಮಾಡಬೇಕಿದೆ.