ರಾಜಕೀಯ

ವರುಣಾ ಕ್ಷೇತ್ರದಿಂದ ವಿಜಯೇಂದ್ರ ಸ್ಪರ್ಧೆ ಇಲ್ಲ ಎಂದ ಬಿಎಸ್‌ವೈ, ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ

ರಾಜ್ಯದ ಪ್ರತಿಷ್ಠಿತ ಕಣವಾಗಿರುವ ವರುಣಾ ಕ್ಷೇತ್ರದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ ವಿರುದ್ಧ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರ ಪುತ್ರ ವಿಜಯೇಂದ್ರ ಸ್ಪರ್ಧೆ ಮಾಡುತ್ತಾರೆ...

ವರುಣಾ ಕ್ಷೇತ್ರದಿಂದ ವಿಜಯೇಂದ್ರ ಸ್ಪರ್ಧೆ ಇಲ್ಲ ಎಂದ ಬಿಎಸ್‌ವೈ, ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ
ವಿಜಯೇಂದ್ರ-ಯತೀಂದ್ರ
Published On :
ನಂಜನಗೂಡು: ರಾಜ್ಯದ ಪ್ರತಿಷ್ಠಿತ ಕಣವಾಗಿರುವ ವರುಣಾ ಕ್ಷೇತ್ರದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ ವಿರುದ್ಧ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರ ಪುತ್ರ ವಿಜಯೇಂದ್ರ ಸ್ಪರ್ಧೆ ಮಾಡುತ್ತಾರೆ ಎಂದು ಹೇಳಲಾಗುತ್ತಿತ್ತು ಆದರೆ ವಿಜಯೇಂದ್ರ ಸ್ಪರ್ಧೆ ಮಾಡುತ್ತಿಲ್ಲ ಎಂಬ ಸುದ್ದಿ ತಿಳಿದ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. 
ಇನ್ನು ವರುಣಾ ಕ್ಷೇತ್ರದ ಅಭ್ಯರ್ಥಿಯನ್ನು ಘೋಷಣೆ ಮಾಡದಂತೆ ಹೈಕಮಾಂಡ್ ಸೂಚನೆ ನೀಡಿದೆ. ಇದರಿಂದ ತೀವ್ರ ಕುತೂಹಲ ಕೆರಳಿಸಿರುವ ವರುಣಾ ಕ್ಷೇತ್ರದ ಅಭ್ಯರ್ಥಿ ಯಾರಾಗಲಿದ್ದಾರೆ ಎಂಬ ಅಧಿಕೃತ ಮಾಹಿತಿ ಸಂಜೆಯೊಳಗೆ ತಿಳಿಯಲಿದೆ. 
ನಂಜನಗೂಡಿನಲ್ಲಿ ಮಾತನಾಡಿದ ಬಿಎಸ್ ಯಡಿಯೂರಪ್ಪ ಅವರು ವರುಣಾ ಕ್ಷೇತ್ರದಿಂದ ವಿಜಯೇಂದ್ರ ಸ್ಪರ್ಧೆ ಮಾಡುತ್ತಿಲ್ಲ ಎಂದು ಹೇಳಿದ ಕ್ಷಣ ಅಲ್ಲಿನ ಬಿಜೆಪಿ ಕಾರ್ಯಕರ್ತರು ತೀವ್ರ ಪ್ರತಿಭಟನೆ ನಡೆಸಿದ್ದಾರೆ. ವಿಜಯೇಂದ್ರಗೆ ಟಿಕೆಟ್ ನೀಡಬೇಕು ಎಂದು ಆಗ್ರಹಿಸಿ ನಂಜನಗೂಡು ಸಮಾವೇಶದಲ್ಲಿದ್ದ ಕುರ್ಚಿ ಛೇರುಗಳನ್ನು ಹೊಡೆದು ಪುಡಿ ಪುಡಿ ಮಾಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.