ನಾಳೆ ಬಿಜೆಪಿ ನಾಯಕರು, ಅಭ್ಯರ್ಥಿಗಳೊಂದಿಗೆ ಪ್ರಧಾನಿ ಮೋದಿ ಸಂವಾದ

ಮೇ 12ರಂದು ಕರ್ನಾಟಕ ವಿಧಾನಸಭೆ ಚುನಾವಣೆ ಮತದಾನ ಹಿನ್ನೆಲೆಯಲ್ಲಿ ಬಿಜೆಪಿ ಅಭ್ಯರ್ಥಿಗಳೊಂದಿಗೆ ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ ಸಂವಾದ ನಡೆಸಲಿದ್ದಾರೆ...
Updated on: 
ನವದೆಹಲಿ: ಮೇ 12ರಂದು ಕರ್ನಾಟಕ ವಿಧಾನಸಭೆ ಚುನಾವಣೆ ಮತದಾನ ಹಿನ್ನೆಲೆಯಲ್ಲಿ ಬಿಜೆಪಿ ಅಭ್ಯರ್ಥಿಗಳೊಂದಿಗೆ ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ ಸಂವಾದ ನಡೆಸಲಿದ್ದಾರೆ. 
ಪ್ರಧಾನಿ ಮೋದಿ ಅವರು ಮೊಬೈಲ್ ಅಪ್ಲಿಕೇಷನ್ ಮೂಲಕ ಕರ್ನಾಟಕ ಬಿಜೆಪಿ ನಾಯಕರು ಹಾಗೂ ಬಿಜೆಪಿ ಚುನಾವಣಾ ಅಭ್ಯರ್ಥಿಗಳೊಂದಿಗೆ ಸಂವಾದ ನಡೆಸಲಿದ್ದಾರೆ. 
ಪ್ರಧಾನಿ ಮೋದಿ ಅವರು ನಾಳೆ 224 ವಿಧಾನಸಭೆ ಕ್ಷೇತ್ರಗಳ ಅಭ್ಯರ್ಥಿಗಳಿಗೆ ಚುನಾವಣೆ ಪ್ರಚಾರ ಕುರಿತಂತೆ ಸೂಕ್ತ ಮಾರ್ಗದರ್ಶನ ನೀಡಲಿದ್ದಾರೆ. ಅತ್ಯಾಧುನಿಕ ತಂತ್ರಜ್ಞಾನವನ್ನು ಬಳಸಿಕೊಂಡು ಬಿಜೆಪಿ ನಾಯಕರ ಜತೆ ಸಂವಾದಕ್ಕೆ ಮುಂದಾಗಿದ್ದಾರೆ. 
ಇನ್ನು ಏಪ್ರಿಲ್ 14ರಿಂದ ಗ್ರಾಮ ಸ್ವರಾಜ್ ಅಭಿಯಾನ ಮುಂದುವರೆಸಿರುವ ಮೋದಿ ಅವರು ಮೇ 5ರವರೆಗೆ ಸಂಸದರು ಮತ್ತು ಶಾಸಕರ ಜತೆ ವಿವಿಧ ಸಮಸ್ಯೆಗಳ ಕುರಿತು ಸಂವಾದ ನಡೆಸಲಿದ್ದಾರೆ. 
ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆ ಮೇ 1ರಿಂದ ರಾಜ್ಯದಲ್ಲಿ ಚುನಾವಣಾ ಪ್ರಚಾರ ನಡೆಸಲಿದ್ದಾರೆ. ರಾಜ್ಯಾದ್ಯಂತ 15 ರಿಂದ 20 ರ್ಯಾಲಿಗಳಲ್ಲಿ ಭಾಗವಹಿಸಲಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com