ವಿಧಾನಸಭೆ ಚುನಾವಣೆ: ಏ.27ರಂದು ರಾಹುಲ್ ಗಾಂಧಿಯಿಂದ ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ

ಕರ್ನಾಟಕ ವಿಧಾನಸಭೆ ಚುನಾವಣೆಗಾಗಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರು ಏಪ್ರಿಲ್ 27ರಂದು ಮಂಗಳೂರಿನಲ್ಲಿ...
ರಾಹುಲ್ ಗಾಂಧಿ
ರಾಹುಲ್ ಗಾಂಧಿ
Updated on: 
ನವದೆಹಲಿ: ಕರ್ನಾಟಕ ವಿಧಾನಸಭೆ ಚುನಾವಣೆಗಾಗಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರು ಏಪ್ರಿಲ್ 27ರಂದು ಮಂಗಳೂರಿನಲ್ಲಿ ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ವಿಧಾನಸಭೆ ಚುನಾವಣೆ ಪ್ರಚಾರಕ್ಕಾಗಿ ನಾಳೆ ಏಳನೇ ಬಾರಿ ರಾಜ್ಯಕ್ಕೆ ಆಗಮಿಸುತ್ತಿರುವ ರಾಹುಲ್ ಗಾಂಧಿ ಅವರು, ಉತ್ತರ ಕನ್ನಡ ಜಿಲ್ಲೆಯ ಅಂಕೋಲ, ಮಸ್ತಿ ಕಟ್ಟೆ ಸರ್ಕಲ್ ಹಾಗೂ ಸರಸ್ವತಿ ಸರ್ಕಲ್ ಗೆ ಭೇಟಿ ನೀಡಲಿದ್ದಾರೆ. ಬಳಿಕ ಬಟ್ಕಳದಲ್ಲಿ ಸಾರ್ವಜನಿಕ ಸಭೆ ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ರಾಹುಲ್ ಗಾಂಧಿ ಅವರು ಶುಕ್ರವಾರ ಮಂಗಳೂರಿನಲ್ಲಿ ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆ ಬಿಡುಗಡೆ ಮಾಡಲಿದ್ದಾರೆ ಎಂದು ಹೆಸರು ಹೇಳಲು ಇಚ್ಚಿಸದ ಕಾಂಗ್ರೆಸ್ ನಾಯಕರೊಬ್ಬರು ತಿಳಿಸಿದ್ದಾರೆ.
ಪ್ರಣಾಳಿಕೆ ಬಗ್ಗೆ ಹೆಚ್ಚಿನ ಮಾಹಿತಿ ನೀಡಲು ನಿರಾಕರಿಸಿದ ಅವರು, ಎಲ್ಲಾ ಸಮುದಾಯಗಳನ್ನು ಗಮನದಲ್ಲಿಟ್ಟುಕೊಂಡು ಪ್ರಣಾಳಿಕೆ ಸಿದ್ಧಪಡಿಸಲಾಗಿದೆ ಎಂದಿದ್ದಾರೆ.
ನಿನ್ನೆಯಷ್ಟೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎರಡು ದಿನಗಳಲ್ಲಿ ಕಾಂಗ್ರೆಸ್ ಪಕ್ಷದ ಚುನಾವಣಾ ಪ್ರಣಾಳಿಕೆ ಬಿಡುಗಡೆ ಮಾಡುವುದಾಗಿ ಹೇಳಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com