ಬಂಡಾಯ ಶಾಸಕರ ಕೇಸ್; ಮೇ 7ರೊಳಗೆ ತೀರ್ಮಾನ ತೆಗೆದುಕೊಳ್ಳಲು ಹೈಕೋರ್ಟ್ ಆದೇಶ

ರಾಜ್ಯ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಮೇ 8ರಂದು ವಿಧಾನಸಭೆ ...
ಕರ್ನಾಟಕ ಹೈಕೋರ್ಟ್
ಕರ್ನಾಟಕ ಹೈಕೋರ್ಟ್
Updated on: 

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಮೇ 8ರಂದು ವಿಧಾನಸಭೆ ವಿಸರ್ಜನೆಯಾಗಲಿರುವುದರಿಂದ ಜೆಡಿಎಸ್ ನ ಇಬ್ಬರು ಬಂಡಾಯ ಶಾಸಕರು ಸಲ್ಲಿಸಿರುವ ಪ್ರಾತಿನಿಧ್ಯ ಕುರಿತು ಮೇ 7 ಅಥವಾ ಅದರೊಳಗೆ ತೀರ್ಮಾನ ತೆಗೆದುಕೊಳ್ಳಬೇಕೆಂದು ವಿಧಾನಸಭೆ ಸ್ಪೀಕರ್ ಗೆ ಹೈಕೋರ್ಟ್ ಆದೇಶ ನೀಡಿದೆ.

ವಿಪ್ ಉಲ್ಲಂಘನೆ ಮಾಡಿದ್ದಕ್ಕಾಗಿ ಜೆಡಿಎಸ್ ನ ಇಬ್ಬರು ಬಂಡಾಯ ಶಾಸಕರನ್ನು ಅನರ್ಹಗೊಳಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಿರುವ ಅರ್ಜಿ ಕುರಿತು ವಿಧಾನಸಭಾಧ್ಯಕ್ಷರು ತೀರ್ಮಾನ ತೆಗೆದುಕೊಳ್ಳಬೇಕೆಂದು ನ್ಯಾಯಮೂರ್ತಿ ರಾಘವೇಂದ್ರ ಎಸ್ ಚೌಹಾನ್ ತೀರ್ಪು ನೀಡಿದ್ದಾರೆ.

ಜೆಡಿಎಸ್ ನ ಬಂಡಾಯ ಶಾಸಕರಾದ ಶ್ರವಣಬೆಳಗೊಳ ವಿಧಾನಸಭಾ ಕ್ಷೇತ್ರದ ಸಿ.ಎನ್.ಬಾಲಕೃಷ್ಣ ಹಾಗೂ ಮೂಡಿಗೆರೆ ಕ್ಷೇತ್ರದ ಬಿ.ಬಿ.ನಿಂಗಯ್ಯ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com