ರಾಜಕೀಯ

'ಹಲವು ಮೊದಲುಗಳ ರಾಜ್ಯ': ಕಾಂಗ್ರೆಸ್​ ಚುನಾವಣಾ ಪ್ರಣಾಳಿಕೆ ಬಿಡುಗಡೆ

'ಹಲವು ಮೊದಲುಗಳ ರಾಜ್ಯ': ಕಾಂಗ್ರೆಸ್​ ಚುನಾವಣಾ ಪ್ರಣಾಳಿಕೆ ಬಿಡುಗಡೆ
ಚುನಾವಣಾ ಪ್ರಣಾಳಿಕೆ ಬಿಡುಗಡೆ ಮಾಡಿದ ರಾಹುಲ್ ಗಾಂಧಿ
Published On :
ಮಂಗಳೂರು: ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆ ನಿಮಿತ್ತ ಶುಕ್ರವಾರ ಕಾಂಗ್ರೆಸ್ ಪಕ್ಷ ತನ್ನ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ.
ಮಂಗಳೂರಿನ ಟಿಎಂಪೈ ಹಾಲ್​​ನಲ್ಲಿ ನಡೆಯುತ್ತಿರುವ ಕಾರ್ಯಕ್ರಮದಲ್ಲಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಚುನಾವಣೆ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ್ದು, ಈ ವೇಳೆ ಸಿಎಂ ಸಿದ್ದರಾಮಯ್ಯ, ಲೋಕಸಭೆ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ, ಜನಾರ್ದನ ಪೂಜಾರಿ, ಬಿ.ಕೆ.ಹರಿಪ್ರಸಾದ್ ಮತ್ತಿತರರು ಹಾಜರಿದ್ದರು. 
ಇದಕ್ಕೂ ಮೊದಲು ಪ್ರಣಾಳಿಕೆ ಬಿಡುಗಡೆ ಸಮಾರಂಭಕ್ಕೆ ಆಗಮಿಸಿದ ಪಕ್ಷದ ಹಿರಿಯ ನಾಯಕ ಜನಾರ್ದನ ಪೂಜಾರಿ ಅವರಿಗೆ ಗೌರವಯುತ ಸ್ವಾಗತ ನೀಡಲಾಯಿತು. ಹಲವು ನಾಯಕರು ಪೂಜಾರಿ ಅವರ ಕಾಲಿಗೆರಗಿ ಆಶೀರ್ವಾದ ಪಡೆದದ್ದು ಕಾರ್ಯಕ್ರಮದ ವಿಶೇಷವಾಗಿತ್ತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.