ಬೆಳಗಾವಿ: ಮೇ 12 ರಂದು ನಡೆಯುವ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಿರುವ ಬಿಜೆಪಿ ಅಭ್ಯರ್ಥಿಗಳ ಪ್ರಚಾರ ನಡೆಸಲು ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವೆ ಸ್ಮೃತಿ ಇರಾನಿ ನಾಳೆ ಬೆಳಗಾವಿಗೆ ಆಗಮಿಸಲಿದ್ದಾರೆ.
ಬೈಲಹೊಂಗಲ ವಿಧಾನಸಭೆ ಕ್ಷೇತ್ರದ ಅಭ್ಯರ್ಥಿ ವಿಶ್ವನಾಥ್ ಪಾಟೀಲ್ ಪರ ಬೆಳಗ್ಗೆ 11.30 ಕ್ಕೆ ಬೈಲ ಹೊಂಗಲದಲ್ಲಿ ಪ್ರಚಾರ ರ್ಯಾಲಿಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಸಂಸದ ಸುರೇಶ್ ಅಂಗಡಿ ತಿಳಿಸಿದ್ದಾರೆ.
ಮತ್ತು ನಾಳೆ ಮಧ್ಯಾಹ್ನ 2 ಗಂಟೆಗೆ ಡಾ. ಬಿ.ಎಸ್ ಜೀರಗೆ ಸಭಾಂಗಣದಲ್ಲಿರುವ ಮಹಿಳಾ ಸಮಾವೇಶದಲ್ಲಿ ಪಾಲ್ಗೊಳ್ಳುವ ಸ್ಮೃತಿ ಇರಾನಿ ಮಹಿಳೆಯರಿಗಾಗಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಯೋಜನೆಗಳ ಬಗ್ಗೆ ತಿಳಿಸಲಿದ್ದಾರೆ.