ಸಿದ್ದರಾಮಯ್ಯ ಸರ್ಕಾರದ ಅಂತ್ಯಕ್ಕೆ ಕೌಂಟ್ ಡೌನ್ ಶುರುವಾಗಿದೆ- ಅಮಿತ್ ಶಾ

ಮೇ 12 ರಂದು ನಡೆಯಲಿರುವ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ, ಸಿದ್ದರಾಮಯ್ಯ ಸರ್ಕಾರದ ಅಂತ್ಯಕ್ಕೆ ಕೌಂಟ್ ಡೌನ್ ಶುರುವಾಗಿದೆ ಎಂದು ಹೇಳಿದ್ದಾರೆ.
ಅಮಿತ್ ಶಾ
ಅಮಿತ್ ಶಾ
Updated on

ಹುನಗುಂದ:  ಮೇ 12 ರಂದು ನಡೆಯಲಿರುವ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ, ಸಿದ್ದರಾಮಯ್ಯ ಸರ್ಕಾರದ  ಅಂತ್ಯಕ್ಕೆ ಕೌಂಟ್ ಡೌನ್ ಶುರುವಾಗಿದೆ ಎಂದು ಹೇಳಿದ್ದಾರೆ.

 ಬಾಗಲಕೋಟೆ ಜಿಲ್ಲೆಯ ಹುನಗುಂದ ವಿಧಾನಸಭಾ ಕ್ಷೇತ್ರದಲ್ಲಿಂದು ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಅಮಿತ್ ಶಾ, ಕಾಂಗ್ರೆಸ್ ಸರ್ಕಾರ 12 ರಾಜ್ಯಗಳಲ್ಲಿ ಅಧಿಕಾರ ಕಳೆದುಕೊಂಡಿದ್ದು, ಇದೀಗ ಕರ್ನಾಟಕದ ಸರದಿ.  ಸಿದ್ದರಾಮಯ್ಯ ಅವರನ್ನು ಅತಿಯಾದ ಬೇಡಿಕೆಯೊಂದಿಗೆ ಬದಾಮಿಯಿಂದಲೂ ಕಾಂಗ್ರೆಸ್ ನಿಲ್ಲಿಸಿದೆ. ಆದರೆ, ಅಲ್ಲಿಯೂ ಅವರು ಸೋಲುತ್ತಾರೆ ಎಂದು ಹೇಳಿದರು.

 ರಾಜ್ಯದಾದ್ಯಂತ ಪ್ರವಾಸ ಮಾಡಿದ್ದು, ಎಲ್ಲೆಲ್ಲೂ ಬಿಜೆಪಿ ಪರ ಅಲೆ ಕಂಡುಬರುತ್ತಿದೆ.  ಈ ಬಾರಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರಿಗೆ ಅವಕಾಶ ಮಾಡಿಕೊಟ್ಟರೆ, ಕರ್ನಾಟಕವನ್ನು ದೇಶದಲ್ಲಿಯೇ ನಂಬರ್ 1 ರಾಜ್ಯವನ್ನಾಗಿ ಮಾಡಲಾಗುವುದು ಎಂದು ಭರವಸೆ ನೀಡಿದರು.

ಎರಡು ದಿನಗಳ ಪ್ರವಾಸದಲ್ಲಿ ಅಮಿತ್ ಶಾ  ಮೂರು ಕಡೆಗಳಲ್ಲಿ ಸಾರ್ವಜನಿಕ ಸಭೆಗಳನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ.

 ಇದಕ್ಕೂ ಮುನ್ನ ಅಮಿತ್ ಶಾ,  ವಿಶ್ವಗುರು ಬಸವೇಶ್ವರರ ಐಕ್ಯಸ್ಥಳ ಕೂಡಲಸಂಗಮಕ್ಕೆ ಆಗಮಿಸಿ ವಿಶೇಷ ಪೂಜೆ ಸಲ್ಲಿಸಿದರು.


Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com