ವಿಮಾನದಲ್ಲಿ ಅಮಿತ್ ಶಾ ಜತೆ ಡೀಲ್: ದಾಖಲೆ ಬಿಡುಗಡೆ ಮಾಡುವಂತೆ ಸಿಎಂಗೆ ಎಚ್ ಡಿಕೆ ಸವಾಲು

ಬಿಜೆಪಿ ಅಧ್ಯಕ್ಷ ಅಮಿತ್ ಶಾ ಹಾಗೂ ಜೆಡಿಎಸ್‌ ರಾಜ್ಯ ಘಟಕದ ಅಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಅವರು...
ಎಚ್ ಡಿ ಕುಮಾರಸ್ವಾಮಿ
ಎಚ್ ಡಿ ಕುಮಾರಸ್ವಾಮಿ
Updated on: 
ಮೈಸೂರು: ಬಿಜೆಪಿ ಅಧ್ಯಕ್ಷ ಅಮಿತ್ ಶಾ ಹಾಗೂ ಜೆಡಿಎಸ್‌ ರಾಜ್ಯ ಘಟಕದ ಅಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಅವರು ವಿಮಾನದಲ್ಲೇ ಮುಂದಿನ ದಿನಗಳಲ್ಲಿ ಮರು ಮೈತ್ರಿ ಮಾಡಿಕೊಳ್ಳುವ ಡೀಲ್ ಮಾಡಿಕೊಂಡಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾನುವಾರ ಹೊಸ ಬಾಂಬ್ ಸಿಡಿಸಿದ್ದಾರೆ.
ಇನ್ನು ಈ ಕುರಿತು ಖಾರವಾಗಿಯೇ ಪ್ರತಿಕ್ರಿಯಿಸಿದ ಕುಮಾಕಸ್ವಾಮಿ, ನಮ್ಮ ಭೇಟಿಯ ಬಗ್ಗೆ ಸಿಎಂ ಬಳಿ ದಾಖಲೆ ಇದ್ದರೆ ಬಿಡುಗಡೆ ಮಾಡಲಿ ಎಂದು ಸವಾಲು ಹಾಕಿದ್ದಾರೆ.
ನಾವು ವಿಮಾನದಲ್ಲಿ ಭೇಟಿ ಮಾಡಿರುವ ದೃಶ್ಯ ಅವರ ಕನಸಿನಲ್ಲಿ ಬಂದಿರಬೇಕು. ಸಿಎಂ ಹಗಲುಗನಸು ಕಾಣುತ್ತಿದ್ದಾರೆ ಎಂದು ತಿರುಗೇಟು ನೀಡಿದರು.
ಕುಮಾರಸ್ವಾಮಿ ಮತ್ತು ಅಮಿತ್ ಶಾ ದೆಹಲಿ ವಿಮಾನ ನಿಲ್ದಾಣದಲ್ಲಿ ಭೇಟಿಯಾಗಿದ್ದಾರೆ ಮತ್ತು ಒಂದೇ ವಿಮಾನದಲ್ಲಿ ಪ್ರಯಾಣಿಸಿದ್ದಾರೆ. ಅದಕ್ಕೆ ಫೋಟೊ ಬೇಕಿದ್ದರೆ ಕೊಡಬಹುದು. ಜೆಡಿಎಸ್ ಪಕ್ಷ ಬಿಜೆಪಿಯ ಬಿ ಟೀಮ್. ಎರಡಕ್ಕೂ ಜನರ ಅಭಿವೃದ್ಧಿ ಬಗ್ಗೆ ಚಿಂತೆ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ
ದೂರಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com