ವಿಧಾನಸಭಾ ಚುನಾವಣೆ; ಮೇ.7ಕ್ಕೆ ಕೋಲಾರಕ್ಕೆ ಪ್ರಧಾನಿ ಮೋದಿ ಭೇಟಿ

ರಾಜ್ಯ ವಿಧಾನಸಭಾ ಚುನಾವಣೆ ಹತ್ತಿರ ಬರುತ್ತಿದ್ದು, ರಾಜಕೀಯ ಪಕ್ಷಗಳ ಪ್ರಚಾರ ಕಾರ್ಯಗಳು ಈಗಾಗಲೇ ರಂಗೇರ ತೊಡಗಿವೆ. ಈ ನಡುವೆಯೇ ಮೇ ತಿಂಗಳಿನಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ...
ಪ್ರಧಾನಮಂತ್ರಿ ನರೇಂದ್ರ ಮೋದಿ
ಪ್ರಧಾನಮಂತ್ರಿ ನರೇಂದ್ರ ಮೋದಿ
Updated on: 
ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆ ಹತ್ತಿರ ಬರುತ್ತಿದ್ದು, ರಾಜಕೀಯ ಪಕ್ಷಗಳ ಪ್ರಚಾರ ಕಾರ್ಯಗಳು ಈಗಾಗಲೇ ರಂಗೇರ ತೊಡಗಿವೆ. ಈ ನಡುವೆಯೇ ಮೇ ತಿಂಗಳಿನಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರು ಕೋಲಾರಕ್ಕೆ ಭೇಟಿ ನೀಡಲಿದ್ದು, ಪ್ರಚಾರ ನಡೆಸಲಿದ್ದಾರೆಂದು ಭಾನುವಾರ ತಿಳಿದುಬಂದಿದೆ. 
ಕೆಜಿಎಫ್ ಘಟಕದ ಅಧ್ಯಕ್ಷ ಬಟಾ ಗೋಪಾಲ್ ಅವರು ಈ ಕುರಿತು ಮಾಹಿತಿ ನೀಡಿದ್ದು, ಮೇ.7 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ರಾಜ್ಯಕ್ಕೆ ಭೇಟಿ ನೀಡಲಿದ್ದು, ಕೋಲಾರ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಪ್ರಚಾರ ನಡೆಸಲಿದ್ದಾರೆಂದು ಹೇಳಿದ್ದಾರೆ. 
ಇದರಂತೆ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರೂ ಕೂಡ ಏ.30ಕ್ಕೆ ರಾಜ್ಯಕ್ಕೆ ಭೇಟಿ ನೀಡಲಿದ್ದು, ಕೋಲಾರ, ಕೆಜಿಎಫ್ ಹಾಗೂ ಗೌರಿಬಿದನೂರಿನಲ್ಲಿ ಪ್ರಚಾರ ಕಾರ್ಯದಲ್ಲಿ ತೊಡಗಿಕೊಳ್ಳಲಿದ್ದಾರೆ. ಇದೇ ದಿನದಂದು ಸಾರ್ವಜನಿಕ ಸಭೆಯೊಂದು ನಡೆಯಲಿದ್ದು, ಸಭೆಯಲ್ಲಿ ಬಿಜೆಪಿ ನಾಯಕರು ಭಾಗಿಯಾಗಲಿದ್ದಾರೆಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com