ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಗೆಲವು ಸಾಧಿಸಲಿದೆ: ರಾಹುಲ್ ಗಾಂಧಿ

Published On :
ನವದೆಹಲಿ: ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಗೆಲವು ಸಾಧಿಸಲಿದ್ದು, 2019ರಲ್ಲಿ ಕೇಂದ್ರದಲ್ಲೂ ಅಧಿಕಾರಕ್ಕೆ ಬರಲಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರು ಭಾನುವಾರ ಹೇಳಿದ್ದಾರೆ.
ರಾಜಧಾನಿ ದೆಹಲಿಯ ರಾಮ್ ಲೀಲಾ ಮೈದಾನದಲ್ಲಿ ನಡೆದ ಜನಾಕ್ರೋಶ ರ್ಯಾಲಿಯಲ್ಲಿ ಮಾತನಾಡಿರುವ ಅವರು, ಕರ್ನಾಟಕ, ರಾಜಸ್ತಾನ, ಮಧ್ಯಪ್ರದೇಶ, ಛತ್ತೀಸ್ಗಢ ವಿಧಾನಸಭೆ ಚುನಾವಣೆಗಳಲ್ಲಿ ನಾನು ಬಿಜೆಪಿಯನ್ನು ಸೋಲಿಸಿದ್ದೆವು. 2019ರ ಲೋಕಸಭೆ ಚುನಾವಣೆಯಲ್ಲೂ ಬಿಜೆಪಿಯನ್ನು ನಾನು ಮಣ್ಣುಮುಕ್ಕಿಸುತ್ತೇವೆಂದು ಘೋಷಣೆ ಮಾಡಿದ್ದಾರೆ.
ಭಾರತವನ್ನು ಬದಲಿಸಲು ನಮಗೆ 5 ವರ್ಷದ ಸಮಯಾವಕಾಶ ಬೇಕು ಎಂದು ಕಾಲಾವಕಾಶ ಕೇಳಿದ ರಾಹುಲ್ ಗಾಂಧಿಯವರು ಪ್ರಧಾನಮಂತ್ರಿ ನರೇಂದ್ರ ಮೋದಿ, ಬಿಜೆಪಿ ಹಾಗೂ ಆರ್'ಎಸ್ಎಸ್'ನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡರು.
ಮೋದಿಯವರು ಇತ್ತೀಚೆಗೆ ಚೀನಾಗೆ ಹೋದರೂ ಡೋಕ್ಲಾಮ್ ವಿವಾದವನ್ನು ಪ್ರಸ್ತಾಪಿಸಲಿಲ್ಲ. ಇವರೆಂತಹ ಪ್ರಧಾನಿ? ಎಂದು ಟೀಕಿಸಿದರು.
ಹಳೆಯ ಸರ್ಕಾರಗಳು ಏನು ಮಾಡಿವೆ ಎಂದು ಕೇಳುವ ಪ್ರಧಾನಿ ಮೋದಿಯವರು ತಾವೇನು ಕೊಡುಗೆ ನೀಡಿದ್ದೇವೆಂಬುದನ್ನು ಆತ್ಮಾವಲೋಕನ ಮಾಡಿಕೊಳ್ಳಬೇಕು. ಮೋದಿ ಅವರು ಜನರಿಗೆ ನಿರುದ್ಯೋಗ, ಗಬ್ಬರ ಸಿಂಗ್ ಟ್ಯಾಕ್ಸ್ (ಜಿಎಸ್'ಟಿ) ಹಾಗೂ ಬಿಜೆಪಿ ಶಾಸಕನ ಕಡೆಯಿಂದ ಅತ್ಯಾಚಾರ (ಉನ್ನಾವೋ ಅತ್ಯಾಚಾರ) ಕೊಡುಗೆ ನೀಡಿದರು ಎಂದು ಟೀಕಿಸಿದರು.
ಭ್ರಷ್ಟಾಚಾರದ ವಿಚಾರದಲ್ಲಿ ಮೋದಿ ದ್ವಿಮುಖ ನೀತಿ ಅನುಸರಿಸುತ್ತಿದ್ದಾರೆ. ಇಂದು ದೇಶದಲ್ಲಿ ಆರ್ಥಿಕತೆ ಹದಗೆಟ್ಟಿದೆ. ಸಂವಿಧಾನಿಕ ಸಂಸ್ಥೆಗಳನ್ನು ಕಡೆಗಣಿಸಲಾಗುತ್ತಿದೆ. ಮಹಿಳೆಯರ ಭದ್ರತೆ ವಿಚಾರದಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಕಿಡಿಕಾರಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Congressಕಾಂಗ್ರೆಸ್bjpಬಿಜೆಪಿRahul Gandhiರಾಹುಲ್ ಗಾಂಧಿKarnataka Assembly Electionಕರ್ನಾಟಕ ವಿಧಾನಸಭಾ ಚುನಾವಣೆ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


