ವಿಮಾನದಲ್ಲಿ ತೆರಳಿ ಕುಮಾರಸ್ವಾಮಿ, ಅಮಿತ್ ಶಾ ಒಳಒಪ್ಪಂದ ಮಾಡಿಕೊಂಡಿದ್ದಾರೆ: ಸಿಎಂ ಸಿದ್ದರಾಮಯ್ಯ

ಜೆಡಿಎಸ್ ಪಕ್ಷವನ್ನು ಈವರೆಗೂ ಬಿಜೆಪಿಯ ಬಿ ಟೀಂ ಎಂದು ಟೀಕಿಸುತ್ತಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇದೀಗ ಹೊಸ ಬಾಂಬ್ ಸಿಡಿಸಿದ್ದು, ಜೆಡಿಎಸ್ ಹಾಗೂ ಬಿಜೆಪಿ ನಡುವೆ ಒಳಒಪ್ಪಂದವಾಗಿದೆ ಎಂದು ಭಾನುವಾರ ಹೇಳಿದ್ದಾರೆ...
ಮುಖ್ಯಮಂತ್ರಿ ಸಿದ್ದರಾಮಯ್ಯ
ಮುಖ್ಯಮಂತ್ರಿ ಸಿದ್ದರಾಮಯ್ಯ
Updated on: 
ಬೆಂಗಳೂರು: ಜೆಡಿಎಸ್ ಪಕ್ಷವನ್ನು ಈವರೆಗೂ ಬಿಜೆಪಿಯ ಬಿ ಟೀಂ ಎಂದು ಟೀಕಿಸುತ್ತಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇದೀಗ ಹೊಸ ಬಾಂಬ್ ಸಿಡಿಸಿದ್ದು, ಜೆಡಿಎಸ್ ಹಾಗೂ ಬಿಜೆಪಿ ನಡುವೆ ಒಳಒಪ್ಪಂದವಾಗಿದೆ ಎಂದು ಭಾನುವಾರ ಹೇಳಿದ್ದಾರೆ. 
ನಿನ್ನೆಯಷ್ಟೇ ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಸಿದ್ದರಾಮಯ್ಯ ಅವರು, ಯಡಿಯೂರಪ್ಪ ಮತ್ತು ಕುಮಾರಸ್ವಾಮಿ ಪ್ರಮಾಣ ವಚನಕ್ಕೆ ಈಗಾಗಲೇ ಮುಹೂರ್ತವನ್ನೂ ನಿಗದಿಪಡಿಸಿಕೊಂಡಿದ್ದಾರೆ. ಅಮಿತ್ ಶಾ ಮತ್ತು ಕುಮಾರಸ್ವಾಮಿ ಒಂದೇ ವಿಮಾನದಲ್ಲಿ ರಾಜಧಾನಿ ದೆಹಲಿಗೆ ಹೋಗಿದ್ದಾರೆ. ಇಬ್ಬರೂ ಜೊತೆಗೆ ಪ್ರಯಾಣಿಸಿರುವ ಫೋಟೋ ನನ್ನ ಬಳಿ ಇದ್ದು, ಸೂಕ್ತ ಸಮಯ ಬಂದಾಗ ದಾಖಲೆ ಸಮೇತ ಬಿಡುಗಡೆ ಮಾಡುತ್ತೇನೆಂದು ಹೇಳಿದ್ದಾರೆ. 
ಸಿದ್ದರಾಮಯ್ಯ ಅವರ ಈ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಕುಮಾರಸ್ವಾಮಿಯವರು, ನಾನು ಅಮಿತ್ ಶಾ ಅವರನ್ನು ಯಾಕೆ ಭೇಟಿ ಮಾಡಲಿ...? ನನಗೆ ಅಂತಹ ಯಾವುದೇ ಪರಿಸ್ಥಿತಿ ಬಂದಿಲ್ಲ. ನನ್ನ-ಶಾ ಬಹಗ್ಗೆ ಸೂಕ್ತ ದಾಖಲೆಗಳಿದ್ದರೆ ಬಿಡುಗಡೆ ಮಾಡಲಿ. ಸಿದ್ದರಾಮಯ್ಯ ಅವರು ತಮ್ಮ ಘನತೆಗೆ ತಕ್ಕಂತೆ ಮಾತನಾಡಬೇಕು ಎಂದು ತಿರುಗೇಟು ನೀಡಿದ್ದಾರೆ. 
ಇದರಂತೆ ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆಯವರು ಸಿದ್ದರಾಮಯ್ಯ ವಿರುದ್ದ ತೀವ್ರವಾಗಿ ಕಿಡಿಕಾರಿದ್ದು, ಚುನಾವಣೆ ಹಿನ್ನಲೆಯಲ್ಲಿ ಜನರನ್ನು ತಪ್ಪು ಹಾದಿಗೆಳೆಯಲು ಸಿದ್ದರಾಮಯ್ಯ ಅವರು ಯತ್ನಿಸುತ್ತಿದ್ದಾರೆ. ಹೀಗಾಗಿಯೇ ಬೇಜವಾಬ್ದಾರಿತನದ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಎಲ್ಲೆಡೆ ಪೊಲೀಸರು ಹಾಗೂ ಗುಪ್ತಚರ ದಳಗಳು ಅವರ ಹಿಂದೆ ಮುಂದೆ ಹೋಗುತ್ತಿರುವ ಪರಿಸ್ಥಿತಿಗಳಲ್ಲಿ ಕುಮಾರಸ್ವಾಮಿಯವರೊಂದಿಗೆ ಶಾ ಅವರು ಹೇಗೆ ಗೌಪ್ಯ ಮಾತುಕತೆ ನಡೆಸಲು ಸಾಧ್ಯ...? ಎಂದು ಪ್ರಶ್ನಿಸಿದ್ದಾರೆ. 
ಕುಮಾರಸ್ವಾಮಿ ಹಾಗೂ ಅಮಿತ್ ಶಾ ಗೌಪ್ಯ ಮಾತುಕತೆ ನಡೆಸಿರುವ ಕುರಿತು ತಮ್ಮ ಬಳಿ ದಾಖಲೆಗಳಿರುವುದೇ ಆದರೆ, ಬಿಡುಗಡೆ ಮಾಡಲಿ... ಇಲ್ಲವೇ ಕೂಡಲೇ ಅಮಿತ್ ಶಾ ಅವರ ಬಳಿ ಕ್ಷಮೆಯಾಚಿಸಲಿ ಎಂದಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com