ರಾಜಕೀಯಕ್ಕೆ ಕಾಂಗ್ರೆಸ್ ಹಿರಿಯ ನಾಯಕ ಕಾಗೋಡು ತಿಮ್ಮಪ್ಪ ವಿದಾಯ

ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಹಾಗೂ ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅವರು ಚುನಾವಣಾ ಸಕ್ರಿಯ ರಾಜಕಾರಣದಿಂದ ನಿವೃತ್ತಿ ಪಡೆಯುವುದಾಗಿ ಮಂಗಳವಾರ ಘೋಷಣೆ ಮಾಡಿದ್ದಾರೆ...
ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಹಾಗೂ ಮಾಜಿ ಸಚಿವ ಕಾಗೋಡು ತಿಮ್ಮಪ್ಪ
ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಹಾಗೂ ಮಾಜಿ ಸಚಿವ ಕಾಗೋಡು ತಿಮ್ಮಪ್ಪ
ಬೆಂಗಳೂರು: ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಹಾಗೂ ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅವರು ಚುನಾವಣಾ ಸಕ್ರಿಯ ರಾಜಕಾರಣದಿಂದ ನಿವೃತ್ತಿ ಪಡೆಯುವುದಾಗಿ ಮಂಗಳವಾರ ಘೋಷಣೆ ಮಾಡಿದ್ದಾರೆ. 
ಲೋಕಸಭೆ ಚುನಾವಣೆ ಹೊಸ್ತಿಲಲ್ಲಿ ಹಿರಿಯ ನಾಯಕರು ಚುನಾವಣಾ ನಿವೃತ್ತಿ ಮಾತನಾಡಿರುವುದು ಕಾಂಗ್ರೆಸ್ ಪಕ್ಷಕ್ಕೆ ಭಾರೀ ಹಿನ್ನಡೆಯುಂಟು ಮಾಡುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ. 
ವಿಧಾನಸೌಧದಲ್ಲಿ ನಿನ್ನೆ ಸುದ್ದಿಗಾರರೊಂದಿಗೆ ಮಾತನಾಡಿದ ಕಾಗೋಡು ತಿಮ್ಮಪ್ಪ ಅವರು, ನನಗೆ ವಯಸ್ಸಾಗಿಯಿತು. ಮಾಡೋ ಕೆಲಸ ಎಲ್ಲವನ್ನು ಮಾಡಿದ್ದೇನೆ. ಇಷ್ಟೇ ಸಾಕು. ಇನ್ನು ಚುನಾವಣಾ ರಾಜಕಾರಣದಿಂದ ದೂರ ಉಳಿಯುತ್ತೇನೆ. ಸಮಾಜದಲ್ಲಿ ಬೇರೆ ರೀತಿಯಲ್ಲಿ ತೊಡಗಿಸಿಕೊಳ್ಳುತ್ತೇನೆ. ಚುನಾವಣಾ ರಾಜಕೀಯ ಸಾಕಾಗಿದೆ ಎಂದು ಹೇಳಿದ್ದಾರೆ. 
ಈ ಮೂಲಕ ಮುಂದಿನ ಲೋಕಸಭಾ ಚುನಾವಣೆಯಲ್ಲಿಯೂ ಸ್ಪರ್ಧಿಸುವುದಿಲ್ಲ ಎಂಬ ಸಂದೇಶವನ್ನು ರವಾನಿಸಿದ್ದಾರೆ. 
1961ರಲ್ಲಿ ತಾಲೂಕು ಬೋರ್ಡ್ ಸದಸ್ಯರಾಗಿ ರಾಜಕೀಯ ಪ್ರವೇಶಿಸಿದ್ದ ಕಾಗೋಡು ತಿಮ್ಮಪ್ಪ ಅವರು, ಗುಂಡೂರಾವ್, ವೀರಪ್ಪ ಮೊಯ್ಲಿ, ಎಸ್.ಎಂ. ಕೃಷ್ಣ, ಸಿದ್ದರಾಮಯ್ಯ ಸರ್ಕಾರದಲ್ಲಿ ಸಚಿವರಾಗಿ ಕಾರ್ಯನಿರ್ವಹಿಸಿದ್ದರು. 2013ರಲ್ಲಿ ಸ್ಪೀಕರ್ ಆಗಿಯೂ ಕಾರ್ಯನಿರ್ವಹಿಸಿದ್ದರು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com