ಸಂಪುಟ ವಿಸ್ತರಣೆ : ಇದೇ ತಿಂಗಳ 15ರ ನಂತರ ಕಾಂಗ್ರೆಸ್ ನಾಯಕರು ರಾಹುಲ್ ಜೊತೆ ಚರ್ಚೆ- ಕೆಪಿಸಿಸಿ ಅಧ್ಯಕ್ಷ

ರಾಜ್ಯ ಸಚಿವ ಸಂಪುಟ ವಿಸ್ತರಣೆ ಸಂಬಂಧ ಇದೇ ತಿಂಗಳ 15 ರ ನಂತರ ರಾಜ್ಯ ನಾಯಕರು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಜೊತೆಗೆ ಚರ್ಚೆ ನಡೆಸಲಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ದಿನೇಶ್ ಗುಂಡೂರಾವ್
ದಿನೇಶ್ ಗುಂಡೂರಾವ್
Updated on: 

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆ ಸಂಬಂಧ  ಇದೇ ತಿಂಗಳ 15 ರ ನಂತರ  ರಾಜ್ಯ ನಾಯಕರು  ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಜೊತೆಗೆ ಚರ್ಚೆ ನಡೆಸಲಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ  ದಿನೇಶ್ ಗುಂಡೂರಾವ್ ಹೇಳಿದ್ದಾರೆ.

 ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಅನೇಕ ಹಿರಿಯ ನಾಯಕರನ್ನು ಸಂಪುಟಕ್ಕೆ ಸೇರಿಸಿಕೊಂಡಿಲ್ಲ. ಹೀಗಾಗಿ ಅವರನ್ನು ಶೀಘ್ರದಲ್ಲಿಯೇ  ಪಕ್ಷ ಸಂಪುಟಕ್ಕೆ ಸೇರಿಸಿಕೊಳ್ಳಲಿದೆ ಎಂದರು.

ಆಗಸ್ಚ್ 29 ರಂದು ನಡೆಯಲಿರುವ ನಗರ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಜೆಡಿಎಸ್ ಜೊತೆಗೆ ಮೈತ್ರಿ ಸಂಬಂಧ ಕಾಂಗ್ರೆಸ್ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ ಎಂದು ದಿನೇಶ್ ಗುಂಡೂರಾವ್ ತಿಳಿಸಿದರು.

ನಂತರ ಜೆಡಿಎಸ್   ವರಿಷ್ಠ ಎಚ್ . ಡಿ. ದೇವೇಗೌಡರ ಮನೆಗೆ  ದಿನೇಶ್ ಗುಂಡೂರಾವ್ ಭೇಟಿ ನೀಡಿದರು.   ಜೆಡಿಎಸ್ -ಕಾಂಗ್ರೆಸ್ ಮೈತ್ರಿ ಸರ್ಕಾರ ಹಾಗೂ ನಗರ ಸ್ಥಳೀಯ ಸಂಸ್ಥೆ ಚುನಾವಣೆ ಸಂಬಂಧ ಉಭಯ ನಾಯಕರು ಮಾತುಕತೆ ನಡೆಸಿದ್ದಾರೆ ಎಂಬಂತಹ ಮಾತುಗಳು ಮೂಲಗಳಿಂದ ತಿಳಿದುಬಂದಿದೆ.

ನಗರ ಸ್ಥಳೀಯ ಸಂಸ್ಥೆ ಚುನಾವಣೆ ಪೂರ್ವ ಮೈತ್ರಿ ಮಾಡಿಕೊಳ್ಳಲು ಕಾಂಗ್ರೆಸ್ ಹಾಗೂ ಜೆಡಿಎಸ್ ನಾಯಕರು ಒಲವು ಹೊಂದಿಲ್ಲ ಎಂಬಂತಹ ಮಾತುಗಳು ಕೇಳಿಬರುತ್ತಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com