ರಾಜ್ಯದ ಮೈತ್ರಿ ಸರ್ಕಾರ ಅಸ್ಥಿರಗೊಳಿಸಲು ತೆರೆಮರೆಯಲ್ಲಿ ಬಿಜೆಪಿ ಯತ್ನ: ಕಾಂಗ್ರೆಸ್

ರಾಜ್ಯದಲ್ಲಿ ಅಧಿಕಾರ ನಡೆಸುತ್ತಿರುವ ಸಮ್ಮಿಶ್ರ ಸರ್ಕಾರವನ್ನು ಅಸ್ಥಿರಗೊಳಿಸಲು ಬಿಜೆಪಿ ನಾಯಕರು ತೆರೆಮರೆಯಲ್ಲಿ ಯತ್ನ ನಡೆಸುತ್ತಿದ್ದಾರೆಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರು ಮಂಗಳವಾರ ಬಹಿರಂಗವಾಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ...
ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್
ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್
ಬೆಂಗಳೂರು: ರಾಜ್ಯದಲ್ಲಿ ಅಧಿಕಾರ ನಡೆಸುತ್ತಿರುವ ಸಮ್ಮಿಶ್ರ ಸರ್ಕಾರವನ್ನು ಅಸ್ಥಿರಗೊಳಿಸಲು ಬಿಜೆಪಿ ನಾಯಕರು ತೆರೆಮರೆಯಲ್ಲಿ ಯತ್ನ ನಡೆಸುತ್ತಿದ್ದಾರೆಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರು ಮಂಗಳವಾರ ಬಹಿರಂಗವಾಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. 
ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿರುವ ಅವರು, ಬಿಜೆಪಿ ನಾಯಕರು ನೀತಿಗೆಟ್ಟ ಹಾದಿ ತುಳಿಯಲು ಮುಂದಾಗಿದ್ದಾರೆ. ರಾಜ್ಯದ ಮೈತ್ರಿ ಸರ್ಕಾರವನ್ನು ಅಸ್ಥಿರಗೊಳಿಸಲು ಹಾಗೂ ಉರುಳಿಸಲು ತೆರೆಮರೆಯಲ್ಲಿ ಪ್ರಯತ್ನಗಳನ್ನು ನಡೆಸುತ್ತಿದ್ದಾರೆ. ಪಕ್ಷದ 80 ಶಾಸಕರನ್ನು ಸಂಪರ್ಕಿಸಿರುವ ಬಿಜೆಪಿ ನಾಯಕರು ಆಮಿಷವೊಡ್ಡಿದ್ದಾರೆಂದು ಆರೋಪಿಸಿದ್ದಾರೆ. 
ಈ ಮೊದಲೇ ಒಮ್ಮೆ ಸರ್ಕಾರ ರಚಿಸಲು ಹಾಗೂ ಆಪರೇಷನ್ ಮೂಲಕ ಸರ್ಕಾರ ರಚನೆ ತಪ್ಪಿಸಲು ಅನೈತಿಕ ದಾರಿಯಲ್ಲಿ ನಡೆದಿದ್ದರು. ಇದೀಗ ಮತ್ತೆ ಕಾಂಗ್ರೆಸ್ ಪಕ್ಷದರವನ್ನು ಸಂಪರ್ಕಿಸಿ ಆಮಿಷವೊಡ್ಡುವುದು ಎಷ್ಟು ಸರಿ ಎಂದು ಪ್ರಶ್ನೆ ಮಾಡಿದ್ದಾರೆ. 
ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಅವರು ದೆಹಲಿ ಮಟ್ಟದಲ್ಲಿ ಲಾಭಿ ನಡೆಸುತ್ತಿದ್ದಾರೆ. ಆದರೆ, ಅವರ ಪ್ರಯತ್ನಕ್ಕೆ ನಮ್ಮ ಶಾಸಕರು ಬಲಿಯಾಗುವುದಿಲ್ಲ. ದೆಹಲಿ ತೆರಳಿರುವ ಶಾಸಕರು ಪಕ್ಷದ ಸಂಘಟನೆ, ಬಲವರ್ಧನೆ ಬಗ್ಗೆ ಚರ್ಚಿಸಲು ತೆರಳಿದ್ದಾರೆಯೇ ವಿನಃ ಬೇರಾವುದಕ್ಕೂ ಎಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com