ಲೋಕಸಭೆ ಚುನಾವಣೆಯಲ್ಲಿ ಮಾತ್ರ ಕಾಂಗ್ರೆಸ್ - ಜೆಡಿಎಸ್ ಮೈತ್ರಿ: ಸಿದ್ದರಾಮಯ್ಯ

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಜೆಡಿಎಸ್ ಜೊತೆ ಮೈತ್ರಿ ಸಾಧ್ಯತೆ ಕಡಿಮೆ. ಆದರೆ ಲೋಕಸಭೆಯಲ್ಲಿ ಕಾಂಗ್ರೆಸ್ ...
ಸಿದ್ದರಾಮಯ್ಯ
ಸಿದ್ದರಾಮಯ್ಯ
ಹುಬ್ಬಳ್ಳಿ: ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಜೆಡಿಎಸ್ ಜೊತೆ ಮೈತ್ರಿ ಸಾಧ್ಯತೆ ಕಡಿಮೆ. ಆದರೆ ಲೋಕಸಭೆಯಲ್ಲಿ ಕಾಂಗ್ರೆಸ್ - ಜೆಡಿಎಸ್ ಮೈತ್ರಿ ಮಾಡಿಕೊಳ್ಳಲಿವೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ಹೇಳಿದ್ದಾರೆ.
ಇಂದು ತಮ್ಮ ಸ್ವಕ್ಷೇತ್ರ ಬಾಗಲಕೋಟೆ ಜಿಲ್ಲೆಯ ಬಾದಾಮಿಗೆ ತೆರಳುವ ಮುನ್ನ ಹುಬ್ಬಳ್ಳಿಯ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಿಎಂ, ಸ್ಥಳೀಯ ಸಂಸ್ಥೆಗಳ ಚುನಾವಣೆಯ ಮೈತ್ರಿ ವಿಚಾರವನ್ನು ಜಿಲ್ಲಾ ಘಟಕಗಳ ನಿರ್ಧಾರಕ್ಕೆ ಬಿಡಲಾಗಿದೆ ಎಂದರು.
ಇದೇ ವೇಳೆ, ಮೈತ್ರಿ ಸರ್ಕಾರದಲ್ಲಿ ಜೆಡಿಎಸ್ ಮೇಲುಗೈ ಸಾಧಿಸುತ್ತಿದೆ ಎಂಬ ಪ್ರಶ್ನೆಗೆ ಉತ್ತರಿಸಿದ ಸಿದ್ದರಾಮಯ್ಯ, ಶಾದಿ ಭಾಗ್ಯ ಯೋಜನೆ ಕೈಬಿಟ್ಟ ವಿಚಾರ ಸೇರಿದಂತೆ ಎಲ್ಲಾ ವಿಚಾರಗಳನ್ನು ಸಮ್ಮಿಶ್ರ ಸರ್ಕಾರದ ಸಮನ್ವಯ ಸಮಿತಿ ಸಭೆಯಲ್ಲಿ ಚರ್ಚಿಸಲಾಗಿದೆ ಎಂದರು.
ನಾವು ಮೈತ್ರಿ ಧರ್ಮ ಪಾಲಿಸುತ್ತಿದ್ದೇವೆ. ಜೆಡಿಎಸ್ ನವರು ಅದನ್ನು ಪಾಲಿಸಬೇಕು ಎಂದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com