ಸ್ವಾತಂತ್ರ್ಯ ತಂದುಕೊಟ್ಟ ಕಾಂಗ್ರೆಸ್ ಪಕ್ಷ ಇಂದು ಅಸ್ತಿತ್ವ ಕಳೆದುಕೊಳ್ಳುತ್ತಿದೆ: ಹೆಚ್‍ಡಿ ದೇವೇಗೌಡ

ದೇಶಕ್ಕೆ ಸ್ವಾತಂತ್ರ್ಯ ತಂದು ಕೊಟ್ಟ ಪಕ್ಷ ಕಾಂಗ್ರೆಸ್ ಇಂದು ತನ್ನ ಅಸ್ತಿತ್ವವನ್ನು ಕಳೆದುಕೊಳ್ಳುತ್ತಿದೆ ಎಂದು ಮಾಜಿ ಪ್ರಧಾನಿ ಹೆಚ್‍ಡಿ ದೇವೇಗೌಡ ಅವರು ಹೇಳಿದ್ದಾರೆ...
ಹೆಚ್ ಡಿ ದೇವೇಗೌಡ
ಹೆಚ್ ಡಿ ದೇವೇಗೌಡ
Updated on
ಬೆಂಗಳೂರು: ದೇಶಕ್ಕೆ ಸ್ವಾತಂತ್ರ್ಯ ತಂದು ಕೊಟ್ಟ ಪಕ್ಷ ಕಾಂಗ್ರೆಸ್ ಇಂದು ತನ್ನ ಅಸ್ತಿತ್ವವನ್ನು ಕಳೆದುಕೊಳ್ಳುತ್ತಿದೆ ಎಂದು ಮಾಜಿ ಪ್ರಧಾನಿ ಹೆಚ್‍ಡಿ ದೇವೇಗೌಡ ಅವರು ಹೇಳಿದ್ದಾರೆ. 
ಬೆಂಗಳೂರಿನಲ್ಲಿ ಮಾತನಾಡಿದ ದೇವೇಗೌಡ ಅವರು, ನಾನು ಮೊದಲು ಕಾಂಗ್ರೆಸ್ ನಲ್ಲಿದ್ದವನು. ಕಾಂಗ್ರೆಸ್ ಇಬ್ಭಾಗವಾದಾಗ ಬಂಡಾಯ ಕಾಂಗ್ರೆಸ್ ಗೆ ಹೋದೆ. ದೇಶದಲ್ಲಿ ಪ್ರಾದೇಶಿಕ ಪಕ್ಷಗಳು ತಲೆ ಎತ್ತಿದವು ಎಂದು ಹೇಳಿದ್ದಾರೆ. 
ಭಾರತದಲ್ಲಿ ಪ್ರಜಾಪ್ರಭುತ್ವಕ್ಕೆ ಅಡಿಪಾಯ ಹಾಕಿದ್ದು ದಿವಂಗತ, ಮಾಜಿ ಪ್ರಧಾನಿ ಜವಾಹರ್ ಲಾಲ್ ನೆಹರು ಅವರು, ಆದರೆ ಸಂಸತ್ ನಲ್ಲಿ ನೆಹರು ಬಗ್ಗೆ ಏನೇನೋ ಮಾತನಾಡುತ್ತಿದ್ದಾರೆ. ನಾವು ಏಕೆ ಇಂತಹ ಸ್ಥಿತಿಗೆ ಬಂದಿದ್ದೇವೆ ಎಂದು ಹೇಳಿದರು.
ಸ್ವಾತಂತ್ರ್ಯ ತಂದುಕೊಟ್ಟ ಕಾಂಗ್ರೆಸ್ ಪಕ್ಷ ಅಸ್ತಿತ್ವ ಕಳೆದುಕೊಳ್ಳಲು ಆರಂಭವಾಗಿದೆ. ದಕ್ಷಿಣ ಭಾರತದಲ್ಲಿ ನಾಯಕರನ್ನು ಗುರುತಿಸಲು ಆಗಲಿಲ್ಲ. 2-3 ದಿನಕ್ಕೆ ಮುಖ್ಯಮಂತ್ರಿಗಳು ಬದಲಾಗುವ ಸ್ಥಿತಿ ಬಂದಿದೆ ಎಂದು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com