ನವೆಂಬರ್ ನೊಳಗೆ ಕಾಂಗ್ರೆಸ್, ಜೆಡಿಎಸ್ ಶಾಸಕರನ್ನು ಸೆಳೆಯಲು ಬಿಜೆಪಿಗೆ ಹೈಕಮಾಂಡ್ ಗಡುವು

ಜೆಡಿಎಸ್- ಕಾಂಗ್ರೆಸ್ ಸರ್ಕಾರವನ್ನು ಉರುಳಿಸಲು ನವೆಂಬರ್ ವರೆಗೂ ಪ್ರಯತ್ನಿಸುತ್ತಿರುವಂತೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಸಮಯ ನೀಡಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ಕಾಂಗ್ರೆಸ್ ಪಕ್ಷದ ಎಲ್ಲಾ 80 ಶಾಸಕರನ್ನು ಬಿಜೆಪಿ ಸಂಪರ್ಕಿಸಿದೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಕಳೆದ ವಾರ ಹೇಳಿಕೆ ನೀಡಿದ್ದರು. ವಿಧಾನಸಭೆ ಚುನಾವಣೆ ನಡೆದ ಮೂರು ತಿಂಗಳ ನಂತರವೂ ಈಗಲೂ  ಬಿಜೆಪಿ ಕೆಲವು ಕಾಂಗ್ರೆಸ್ ಶಾಸಕರನ್ನು ಸಂಪರ್ಕಿಸುತ್ತಿದೆಯೆ ಎಂದು ಅವರು ಪ್ರತಿಕ್ರಿಯಿಸಿದರು.

ಈ ಮಧ್ಯೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಸೇರಿದಂತೆ ಹಲವು ನಾಯಕರು  ಕಾಂಗ್ರೆಸ್ ಮತ್ತು ಜೆಡಿ ಎಸ್  ಶಾಸಕರನ್ನು ಸೆಳೆಯಲು ಯಾವುದೇ ಪ್ರಯತ್ನವಿಲ್ಲ, ಪಕ್ಷದ ಮೂಲಗಳು ಬೇರೆಯದೇ ಕಥೆಯನ್ನು ಸೂಚಿಸುತ್ತವೆ.

ಮೂಲಗಳ ಪ್ರಕಾರ,  ಜೆಡಿಎಸ್- ಕಾಂಗ್ರೆಸ್ ಸರ್ಕಾರವನ್ನು ಉರುಳಿಸಲು ನವೆಂಬರ್ ವರೆಗೂ  ಪ್ರಯತ್ನಿಸುತ್ತಿರುವಂತೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಸಮಯ ನೀಡಿದ್ದಾರೆ. ನವೆಂಬರ್ ವರೆಗೂ ಪಕ್ಷದ ನಾಯಕರು ಶಾಸಕರನ್ನು ಸೆಳೆಯಲು ಯತ್ನಿಸಿ ನಂತರ ಲೋಕಸಭಾ ಚುನಾವಣೆಯತ್ತ ಎಲ್ಲಾ ಗಮನ ನೀಡುವಂತೆ ಸೂಚಿಸಲಾಗಿದೆ ಎನ್ನಲಾಗಿದೆ.

ನವೆಂಬರ್ ನಂತರವೂ ಸಮ್ಮಿಶ್ರ ಸರ್ಕಾರದ ಅಸ್ತಿತ್ವ ಮುಂದುವರೆದ್ದರೆ, ಸಂಸತ್ ಚುನಾವಣೆ ಮುಗಿಯುವವರೆಗೂ  ರಾಜ್ಯದಲ್ಲಿ ಮರಳಿ ಅಧಿಕಾರಕ್ಕೆ ಬರುವ ಎಲ್ಲಾ ಪ್ರಯತ್ನಗಳನ್ನು ನಿಲ್ಲಿಸುವಂತೆ ತಿಳಿಸಲಾಗಿದೆ.

 ಸಮ್ಮಿಶ್ರ ಸರ್ಕಾರ ಅಧಿಕಾರದಲ್ಲಿ ಮುಂದುವರೆದರೆ 11 ಕ್ಷೇತ್ರಗಳಲ್ಲಿ ಗೆಲುವು ಸಾಧಿಸುತ್ತೇವೆ , ಒಂದು ವೇಳೆ ಪತನವಾದರೆ 20 ರಿಂದ 22 ಕ್ಷೇತ್ರಗಳಲ್ಲಿ ಜಯಗಳಿಸುತ್ತೇವೆ ಎಂದು ಬಿಜೆಪಿ  ಚುನಾವಣಾ ಪ್ರಚಾರದ ಉಸ್ತುವಾರಿ ವಹಿಸಿರುವ ಮುಖಂಡರೊಬ್ಬರು ತಿಳಿಸಿದ್ದಾರೆ.

 ಸಂಪುಟ ವಿಸ್ತರಣೆ ನಂತರ ಸರ್ಕಾರ ಬೀಳಿಸುವ ಯತ್ನಕ್ಕೆ ಬಿಜೆಪಿ ಮುಂದಾಗಬಹುದೆಂದು ಕಾಂಗ್ರೆಸ್ ಶಾಸಕರೊಬ್ಬರು ಹೇಳಿದ್ದಾರೆ.  ಈ ಸಂದರ್ಭದಲ್ಲಿ ಲಿಂಗಾಯಿತ ಶಾಸಕರು ಮಾತ್ರವಲ್ಲ, ಹಿಂದುಳಿದ , ಪರಿಶಿಷ್ಟ ಜಾತಿಯ ಶಾಸಕರನ್ನು ಸೆಳೆಯಲು ಬಿಜೆಪಿ ಯತ್ನಿಸುತ್ತಿದೆ.
ಒಂದು ವೇಳೆ ಸೆಳೆಯುವಲ್ಲಿ ವಿಫಲರಾದರೆ  ಪ್ರಾತಿನಿಧ್ಯದ ಆಧಾರದ ಮೇಲೆ ಅವರು ಒಕ್ಕೂಟವನ್ನು ತ್ಯಜಿಸುವ ಸಾಧ್ಯತೆಯಿದೆ ಎಂದು ಬಿಜೆಪಿ ಮುಖಂಡ ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com