ನಾಯಕತ್ವದ ಎಲ್ಲಾ ಲಕ್ಷಣಗಳನ್ನು ಹೊಂದಿರುವ ಸಚಿವ ಎಚ್.ಡಿ.ರೇವಣ್ಣ ಪುತ್ರ ಪ್ರಜ್ವಲ್ ರೇವಣ್ಣ ಅವರು ರಾಜಕೀಯ ಕ್ಷೇತ್ರಕ್ಕೆ ಬರಬೇಕು ಎಂದು ಎಚ್.ವಿಶ್ವನಾಥ್ ಹೇಳಿದರು. 'ಪ್ರಜ್ವಲ್ ರಾಜಕೀಯ ಭವಿಷ್ಯ ಉಜ್ವಲವಾಗಿದೆ. ಆತನಿಗೆ ಸಾಕಷ್ಟು ದೂರದೃಷ್ಟಿ ಇದ್ದು, ಕನ್ನಡ ಹಾಗೂ ಇಂಗ್ಲಿಷ್ ಭಾಷೆ ಮೇಲೆ ಹಿಡಿತವಿದೆ. ಅಲ್ಲದೆ, ನಾಯಕತ್ವದ ಗುಣಗಳನ್ನೂ ಮೈಗೂಡಿಸಿಕೊಂಡಿದ್ದಾರೆ. ಹೀಗಾಗಿ ಆತ ರಾಜಕೀಯದಲ್ಲಿ ಉತ್ತಮವಾಗಿ ಬೆಳೆಯುವ ಭರವಸೆಯ ನಾಯಕನಾಗಲಿದ್ದಾರೆ,'' ಎಂದು ಬಣ್ಣಿಸಿದರು.