ನಾನು ಯಾವ ಕ್ಷೇತ್ರದಿಂದ ಸ್ಪರ್ಧಿಸಬೇಕು ಎಂಬ ಬಗ್ಗೆ ದೇವೇಗೌಡರು, ಕುಮಾರ ಸ್ವಾಮಿ ಮತ್ತು ಎಚ್ ಡಿ ರೇವಣ್ಣ ನಿರ್ಧರಿಸುತ್ತಾರೆ ಎಂದು ಪ್ರಜ್ವಲ್ ತಿಳಿಸಿದ್ದಾರೆ. ಮಂಡ್ಯದಿಂದ ಪ್ರಜ್ವಲ್ ಸ್ಪರ್ಧಿಸಲಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆಯಲ್ಲ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಮಂಡ್ಯದಲ್ಲಿ 7 ಕ್ಷ್ತೇತ್ರಗಳನ್ನು ಅಲಿಲನ ಜನ ಜೆಡಿಎಸ್ ಗೆ ನೀಡಿದ್ದಾರೆ. ಆ ಪುಣ್ಯಭೂಮಿಯಿಂದ ಸ್ಪರ್ಧಿಸಲು ಅವಕಾಶ ಸಿಕ್ಕರೇ ಅದು ನನ್ನ ಅದೃಷ್ಟ ಎಂದು ಹೇಳಿದ್ದಾರೆ.