ಹುಬ್ಬಳ್ಳಿ: ಕರ್ನಾಟಕ ಮಾತ್ರವಲ್ಲ ರಾಹುಲ್ ಗಾಂಧಿ ಯಾವುದೇ ರಾಜ್ಯದಲ್ಲಿ ನಿಂತರೂ ಗೆಲ್ಲುವುದು ಸಾಧ್ಯವಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಹೇಳಿದ್ದಾರೆ.
ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು ರಾಹುಲ್ ವಿರುದ್ಧ ಕಿಡಿ ಕಾರಿದರು. ಯಾವುದೇ ರಾಜ್ಯದಲ್ತಿಲಿ ನಿಂತರೂ ಗೆಲುವು ಸಾಧ್ಯವಿಲ್ಲ ಎಂದು ತಿಳಿದಿರುವ ರಾಹುಲ್ ಗಾಂಧಿ ಅವರು ಬೀದರ್‌ನಿಂದ ಸ್ಪರ್ಧಿಸಲು ಮುಂದಾಗಿದ್ದಾರೆ, ಆದರೆ ಅವರು ಗೆಲುವು ಸಾಧ್ಯವಿಲ್ಲ ಎಂದು ಮಾಜಿ ಸಿಎಂ ಯಡಿಯೂರಪ್ಪ ಹೇಳಿದ್ದಾರೆ.
ಕಾಂಗ್ರೆಸ್ ಪಕ್ಷ ಮುಳುಗುತ್ತಿದೆ ಎಂದು ಅವರೇ ಒಪ್ಪಿಕೊಂಡಿದ್ದಾರೆ. ಅವರನ್ನು ಕಾಂಗ್ರೆಸ್ ಮುಖಂಡರು ಮಾದರಿ ಎಂದು ಹೇಳಿಕೊಳ್ಳುತ್ತಿದ್ದಾರೆ ಎಂದು ಲೇವಡಿ ಮಾಡಿದರು.
ಲಿಂಗಾಯತ ಮುಖ್ಯಮಂತ್ರಿಗಳ ಕೊಡುಗೆ ಪ್ರಶ್ನಿಸಿರುವ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ಮುಖ್ಯಮಂತ್ರಿಯಾಗಿದ್ದಾಗ ಉತ್ತರ ಕರ್ನಾಟಕ್ಕೆ ನೀಡಿದ ಕೊಡುಗೆಗಳ ಬಗ್ಗೆ ಹೇಳಲಿ. ಕುಮಾರಸ್ವಾಮಿ ಅವರು ಉತ್ತರ ಕರ್ನಾಟಕವನ್ನು ಸಂಪೂರ್ಣ ವಾಗಿ ಮರೆತಿದ್ದಾರೆ ಎಂದರು.
ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯದಿಂದ ಸ್ಪರ್ಧಿಸುತ್ತಾರೆ ಎನ್ನುವುದರಲ್ಲಿ ಸತ್ಯಾಂಶವಿಲ್ಲ ಎಂದರು.