ಕುಮಾರಸ್ವಾಮಿ ಸರ್ಕಾರದಿಂದ ರಾಜಕಾರಣಿಗಳ ದೂರವಾಣಿ ಕದ್ದಾಲಿಕೆ: ಸಿ.ಟಿ. ರವಿ ಆರೋಪ

ಸರ್ಕಾರ ಉಳಿಸಿಕೊಳ್ಳಲು ಮುಖ್ಯಮಂತ್ರಿ ಕುಮಾರಸ್ವಾಮಿ ದೂರವಾಣಿ ಕದ್ದಾಲಿಕೆ ಮಾಡಿಸುತ್ತಿದ್ದಾರೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ...
ಎಚ್.ಡಿ ಕುಮಾರ ಸ್ವಾಮಿ
ಎಚ್.ಡಿ ಕುಮಾರ ಸ್ವಾಮಿ
Updated on
ಬೆಂಗಳೂರು:  ಸರ್ಕಾರ ಉಳಿಸಿಕೊಳ್ಳಲು ಮುಖ್ಯಮಂತ್ರಿ ಕುಮಾರಸ್ವಾಮಿ ದೂರವಾಣಿ ಕದ್ದಾಲಿಕೆ ಮಾಡಿಸುತ್ತಿದ್ದಾರೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಆರೋಪಿಸಿದ್ದಾರೆ.
ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜೆಡಿಎಸ್‌ಕಾಂಗ್ರೆಸ್‌ ಮೈತ್ರಿಕೂಟದ ಶಾಸಕರ ಮೇಲೆ ಅವರಿಗೆ ಅನುಮಾನ ಇದೆ.  ಜೆಡಿಎಸ್ ಮತ್ತು ಕಾಂಗ್ರೆಸ್ ಶಾಸಕರು ಬಿಜೆಪಿ ಜೊತೆ ಕೈ ಜೋಡಿಸುತ್ತಾರೆ ಎಂಬ ಭಯದಿಂದ ದೂರವಾಣಿ ಕದ್ದಾಲಿಕೆ ಮಾಡಿಸುತ್ತಿದ್ದಾರೆ ಎಂದು ರವಿ ದೂರಿದ್ದಾರೆ. 
ಕಾಂಗ್ರೆಸ್‌ ಹೈಕಮಾಂಡ್‌ ಸೂಚನೆಯ ಮೇರೆಗೆ ಎಲ್ಲ ಶಾಸಕರನ್ನು  ಕಟ್ಟಿ ಹಾಕಿದ್ದಾರೆ. ಅಧಿಕಾರಿಗಳು ಹಾಗೂ ಪೊಲೀಸರನ್ನು ಬಳಸಿಕೊಂಡು ರಾಜಕಾರಣಿಗಳ ದೂರವಾಣಿ ಕದ್ದಾಲಿಕೆ ಮಾಡಲಾಗುತ್ತಿದೆ ಎಂದು ಹೇಳಿದ್ದಾರೆ,
ಸರ್ಕಾರ ಉಳಿಸಲು ಕೆಲ ಕಾಂಗ್ರೆಸ್ ಮತ್ತು ಜೆಡಿಎಸ್ ಶಾಸಕರು ಬಿಜೆಪಿ ಸಂಪರ್ಕದಲ್ಲಿದ್ದಾರೆ ಎಂದು ಈ ಹಿಂದೆ ಬಿಜೆಪಿಯ ಹಲವು ನಾಯಕರು ಹೇಳಿಕೆ ನೀಡಿದ್ದರು. ಬಿಜೆಪಿ ನಾಯಕರು ಸರ್ಕಾರ ಉರುಳಿಸುವ ಅಗತ್ಯವಿಲ್ಲ, ದೋಸ್ತಿ ಪಕ್ಷಗಳ ಶಾಸಕರೇ ಅದನ್ನು ಮಾಡುತ್ತಾರೆ ಎಂದು ರವಿ ತಿಳಿಸಿದ್ದಾರೆ.
ಕುಮಾರಸ್ವಾಮಿ ಹಾಗೂ ಸಿದ್ದರಾಮಯ್ಯ ಅವರ ನಡುವೆ ಸಮನ್ವಯ ಇಲ್ಲ. ಒಬ್ಬರ ಮುಖ ಇನ್ನೊಬ್ಬರು ನೋಡದ ಸ್ಥಿತಿ ನಿರ್ಮಾಣವಾಗಿದೆ. ಹೀಗಾಗಿ,  ಈ ಸರ್ಕಾರಕ್ಕೆ ಹೆಚ್ಚು ದಿನ ಭವಿಷ್ಯವಿಲ್ಲ.  ಶೀಘ್ರ ಪತನವಾಗಲಿದೆ ಎಂದು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com