ಬೆಂಗಳೂರು: ಬಿಜೆಪಿ ಮತ್ತು ಆರ್ ಎಸ್ ಎಸ್ ನಾಯಕರು ಯಾವುದೇ ಭಯೋತ್ಪಾಕರಿಗಿಂತ ಕಡಿಮೆಯಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಆರೋಪಿಸಿದ್ದಾರೆ.
ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಆಯೋಜಿಸಿದ್ದ ಮಾಜಿ ಪಿಎಂ ದಿವಂಗತ ರಾಜೀವ್ ಗಾಂಧಿಯವರ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು. ಪತ್ರಕರ್ತೆ ಗೌರಿ ಲಂಕೇಶ್ ಹಂತಕರನ್ನು ನಮ್ಮ ಸರ್ಕಾರ ಬಂಧಿಸುವಲ್ಲಿ ಯಶಸ್ವಿಯಾಗಿದೆ. ಮಹಾರಾಷ್ಟ್ರದಲ್ಲಿ ಹತ್ಯೆಯಾದ ದಾಬೋಲ್ಕರ್ ಮತ್ತು ಪನ್ಸಾರೆ ಆರೋಪಿಗಳ ಬಗ್ಗೆ ಬಿಜೆಪಿಯವರು ಒಂದು ಮಾತನ್ನು ಮಾತಾನಾಡದೇ ಮೌನಾವಾಗಿರುವುದು ಏಕೆ ಎಂದು ಪ್ರಶ್ನಿಸಿದ್ದಾರೆ.
ಈ ಹತ್ಯೆ ಪ್ರಕರಣದಲ್ಲಿ ಐಸಿಸ್ ಅಥವಾ ಬೇರೆ ಯಾವುದಾದರೂ ಇಸ್ಲಾಮಿಕ್ ಸಂಘಟನೆಗಳು ಬಾಗಿಯಾಗಿದ್ದರೇ ಬಿಜೆಪಿ ನಾಯಕರು ಮೌನವಾಗಿರಬಹುದಿತ್ತು, ಬಲಪಂಥೀಯ ಹೆಸರಿನಲ್ಲಿ ಬಿಜೆಪಿ, ಆರ್‌ಎಸ್‌ಎಸ್‌ನವರಿಂದ ಉಗ್ರವಾದ ನಡೆಯುತ್ತಿದೆ ಎಂದು ದೂರಿದ್ದಾರೆ.
ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ವಿಚಾರದಲ್ಲಿ ಸನಾತನ ಧರ್ಮದ ಹೆಸರಿನಲ್ಲಿ ಮತ್ತು ಬಲಪಂಥೀಯ ಹೆಸರಿನಲ್ಲಿ ಉಗ್ರವಾದ ಮಾಡುವವರು, ಪ್ರಗತಿಪರ ಚಿಂತನೆ ಇಲ್ಲದ ಬಿಜೆಪಿ, ಆರ್ ಎಸ್‍ಎಸ್ ನಾಯಕರು ಎಂದು ಟೀಕಿಸಿದ್ದಾರೆ.
.
ಗೌರಿ ಲಂಕೇಶ್ ಹತ್ಯೆಯ ಹಿಂದೆ ಯಾರು ಇದ್ದಾರೆ ಎಂಬುವುದು ಒಂದೊಂದೇ ಹೆಸರುಗಳು ಬೆಳಕಿಗೆ ಬರುತ್ತಿದೆ. ಪ್ರಗತಿ ಪರ ಚಿಂತಕರ ಕೊಲೆಗಳ ಬಗ್ಗೆ ಬಿಜೆಪಿ ಅವರು ಮಾತನಾಡೋದಿಲ್ಲ. ಬಲಪಂಥೀಯ, ಹಿಂದೂತ್ವವಾದ ಎಂಬ ಉಗ್ರವಾದಕ್ಕೆ ಬಿಜೆಪಿ ಮತ್ತು ಆರ್ ಎಸ್‍ಎಸ್ ಪೋಷಣೆ ನೀಡುತ್ತಿದೆ ಎಂದು ಆಪಾದಿಸಿದ್ದಾರೆ.