ಬಸನಗೌಡ ಪಾಟೀಲ್
ರಾಜಕೀಯ
ಶ್ರಾವಣ ಮಾಸಾಂತ್ಯದಲ್ಲಿ ಬಿಎಸ್ ವೈ ಸಿಎಂ ಆಗಿ ಪ್ರಮಾಣ: ಬಸನಗೌಡ ಯತ್ನಾಳ್ ಭವಿಷ್ಯ!
ವಿಜಯಪುರ-ಬಾಗಲಕೋಟೆ ಸ್ಥಳೀಯ ಸಂಸ್ಥೆ ಚುನಾವಣೆ ಉಪ ಚುನಾವಣೆಯಲ್ಲಿ ಒಂದು ವೇಳೆ ಬಿಜೆಪಿ ಸೋತರೇ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಕೆಲವು ...
ಬೆಳಗಾವಿ: ವಿಜಯಪುರ-ಬಾಗಲಕೋಟೆ ಸ್ಥಳೀಯ ಸಂಸ್ಥೆ ಚುನಾವಣೆ ಉಪ ಚುನಾವಣೆಯಲ್ಲಿ ಒಂದು ವೇಳೆ ಬಿಜೆಪಿ ಸೋತರೇ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಕೆಲವು ಅಡೆತಡೆಗಳು ಎದುರಾಗಬಹುದು. ಆದರೆ ತಮ್ಮ ಪಕ್ಷದ ಗೆಲುವು ಖಚಿತ ಎಂದು ಬಿಜೆಪಿ ಶಾಸಕ ಫೈರ್ ಬ್ರ್ಯಾಂಡ್ ಖ್ಯಾತಿಯ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ.
ಸೆಪ್ಟಂಬರ್ 6 ರಂದು ನಡೆಯುವ ಉಪ ಚುನಾವಣೆಯಲ್ಲಿ ಎಂಎಲ್ ಸಿ ಸ್ಥಾನ ತಮ್ಮ ಪಕ್ಷಕ್ಕೆ ಒಲಿಯುತ್ತದೆ ಎಂದು ವಿಶ್ವಾಸ ವ್ಯಕ್ತ ಪಡಿಸಿದ್ದಾರೆ.
ರಾಜ್ಯದಲ್ಲಿರುವ ಸಮ್ಮಿಶ್ರ ಸರ್ಕಾರ ಯಾವಾಗ ಬೇಕಾದರೂ ಬಿದ್ದು ಹೋಗಬಹುದು, ರಾಜ್ಯದ ಮುಖ್ಯಮಂತ್ರಿಯಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಶ್ರಾವಣ ಮಾಸ ಅಂತ್ಯದೊಳಗೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಭವಿಷ್ಯ ನುಡಿದಿದ್ದಾರೆ.
ತಾವು ಬಿಜೆಪಿ ರಾಜ್ಯಾಧ್ಯಕ್ಷರಾಗುವ ಬಯಕೆಯಲ್ಲಿದ್ದೀರಾ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ನನ್ನ ಆಸೆಗಳು. ಬಯಕೆಗಳು ಯಾವತ್ತೂ ಈಡೇರುವುದಿಲ್ಲ ಎಂದು ಹೇಳಿದ್ದಾರೆ. ವಿಜಯಾಪುರ ಜಿಲ್ಲಾ ಅಧ್ಯಕ್ಷರ ನೇಮಕ ವಿಳಂಬವಾಗುತ್ತಿರುವುದರ ಬಗ್ಗೆ ಪ್ರತಿಕ್ರಿಯಿಸಿದ ಅವರು, ಅಧ್ಯಕ್ಷ ಸ್ಥಾನಕ್ಕೆ ಆಕಾಂಕ್ಷಿಗಳು ಹೆಚ್ಚಿರುವ ಹಿನ್ನೆಲೆಯಲ್ಲಿ ನೇಮಕ ವಿಳಂಬವಾಗುತ್ತಿದೆ ಎಂದು ಹೇಳಿದ್ದಾರೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ