ಭಗವಂತನ ಆಶೀರ್ವಾದ ಇರೋವರೆಗೂ ಸಿಎಂ ಆಗಿರುತ್ತೇನೆ: ಕುಮಾರಸ್ವಾಮಿ

ಸಿಎಂ ಕುರ್ಚಿಯಲ್ಲಿ ನಾನು ಎಷ್ಟು ದಿನ ಇರಬೇಕೆಂಬುದನ್ನು ಭಗವಂತ ನಿರ್ಧರಿಸುತ್ತಾನೆ. ಎಂದಿಗೂ ಸಹ ನಾನು ಕುಳಿತಿರುವ ಕುರ್ಚಿಯನ್ನು ಭದ್ರ ಮಾಡಿಕೊಳ್ಳೋಕೆ...
ಕುಮಾರಸ್ವಾಮಿ
ಕುಮಾರಸ್ವಾಮಿ
ಬೆಂಗಳೂರು: ಸಿಎಂ ಕುರ್ಚಿಯಲ್ಲಿ ನಾನು ಎಷ್ಟು ದಿನ ಇರಬೇಕೆಂಬುದನ್ನು ಭಗವಂತ ನಿರ್ಧರಿಸುತ್ತಾನೆ. ಎಂದಿಗೂ ಸಹ ನಾನು ಕುಳಿತಿರುವ ಕುರ್ಚಿಯನ್ನು ಭದ್ರ ಮಾಡಿಕೊಳ್ಳೋಕೆ ಮುಂದಾಗುವುದಿಲ್ಲ ಎಂದು ಸಿಎಂ ಹೆಚ್.ಡಿ.ಕುಮಾರಸ್ವಾಮಿ  ಹೇಳಿದ್ದಾರೆ.
ಬೆಂಗಳೂರಿನ ಉತ್ತರ ಹಳ್ಳಿಯಲ್ಲಿ ವಿದ್ಯಾರ್ಥಿ ನಿಲಯ ಉದ್ಘಾಟಿಸಿ ಮಾತನಾಡಿದ ಸಿಎಂ, ಭಗವಂತ ಎಲ್ಲಿಯವರೆಗೂ ಮುಖ್ಯಮಂತ್ರಿ ಆಗಿ ಇರುವಂತೆ ಆಶೀರ್ವಾದ ಮಾಡುತ್ತಾನೋ ಅಲ್ಲಿಯವರೆಗೆ ಇರುತ್ತೇನೆ. ಕೆಲವರು ಸರ್ಕಾರವನ್ನು ಅಸ್ಥಿರ ಮಾಡುವ ಪ್ರಯತ್ನ ಮಾಡುತ್ತಿದ್ದು, ಇಂತಹ ರಾಜಕೀಯ ಬೆಳವಣಿಗೆಯ ಬಗ್ಗೆ ನಾನು ಎಂದಿಗೂ ತಲೆ ಕೆಡಿಸಿಕೊಳ್ಳುವುದಿಲ್ಲ ಎಂದು ಹೇಳಿದ್ದಾರೆ. 
ಕಳೆದ 12 ವರ್ಷದಿಂದ ನಾನು ನೊಂದಿದ್ದೇನೆ. ಇರುವಷ್ಟು ದಿನ ಒಳ್ಳೆಯ ಕೆಲಸಗಳನ್ನು ಮಾಡಬೇಕೆಂದು ನಿರ್ಧರಿಸಿದ್ದೇನೆ ಎಂದು ತಿಳಿಸಿದ್ರು. ಸಮ್ಮಿಶ್ರ ಸರ್ಕಾರದ ಮೈತ್ರಿ ಧರ್ಮವನ್ನು ಪಾಲಿಸಿಕೊಂಡು ಇತಿಮಿತಿಯೊಳಗೆ ಕೆಲಸ ಮಾಡುವುದಾಗಿ ಕುಮಾರಸ್ವಾಮಿ ತಿಳಿಸಿದ್ದಾರೆ.
ರೈತರು ಲೇವಾದೇವಿದಾರರ ಹತ್ತಿರ ಸಾಲ ಪಡೆದುಕೊಂಡಿದ್ರೆ, ಅವರ ಜೀವನವೆಲ್ಲಾ ಬಡ್ಡಿ ಕಟ್ಟುವುದರಲ್ಲೇ ಅಂತ್ಯವಾಗುತ್ತಿದೆ. ರಾಜ್ಯದಲ್ಲಿ ಬಡ್ಡಿ ಕಟ್ಟುವ ರೈತರು ಹೆಚ್ಚಿನ ಸಂಖ್ಯೆಯಲ್ಲಿದ್ದು, ಆತ್ಮಹತ್ಯೆ ಪ್ರಕರಣಗಳು ಹೆಚ್ಚಾಗಲು ಇದು ಮುಖ್ಯ ಕಾರಣವಾಗಿದೆ.
ವರ್ಷಕ್ಕೆ 1 ಲಕ್ಷ 20 ಸಾವಿರಕ್ಕಿಂತಲೂ ಕಡಿಮೆ ವರಮಾನ ಹೊಂದಿರುವ ರೈತರಿಗೆ ಲೇವಾದೇವಿವಾರರು ಸಾಲ ಹಿಂದಿರುಗಿ ಕೊಡುವಂತೆ ಒತ್ತಾಯ ಮಾಡುವಂತಿಲ್ಲ. ಒಂದು ವೇಳೆ ರೈತರಿಗೆ ಒತ್ತಡ ಹಾಕಿದ್ರೆ, ಆತನನ್ನು ಒಂದು ವರ್ಷ ಜೈಲು ಶಿಕ್ಷೆ ವಿಧಿಸುವಂತಹ ಕಾನೂನು ಜಾರಿಗೆ ತರಲು ನಿರ್ಧರಿಸಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com