ಬಳ್ಳಾರಿ: ಜೆಡಿಎಸ್ ಅನ್ನು ಬೆಂಬಲಿಸಬೇಕು ಎನ್ನುವುದು ಕಾಂಗ್ರೆಸ್ ಹೈಕಮಾಂಡ್ ತೀರ್ಮಾನ. ಅದು ನಮ್ಮ ನಿರ್ಧಾರ ಅಲ್ಲ ಎಂದು ಸಮ್ಮಿಶ್ರ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಹೇಳಿದ್ದಾರೆ.
ಇಂದು ನಗರದಲ್ಲಿ ಕನದಾಸ ಪುತ್ಥಳಿ ಅನಾವರಣಗೊಳಿಸಿದ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಿಎಂ, ಸರ್ಕಾರದಲ್ಲಿ ಎರಡು ಪಕ್ಷಗಳ ನಡುವೆ ಸಮನ್ವಯ ಸಾಧಿಸುವದಷ್ಟೇ ಸಮನ್ವಯ ಸಮಿತಿ ಕೆಲಸ ಎಂದರು.
ಸಮನ್ವಯ ಸಮಿತಿ ನಿರ್ಧಿಸಿದರೆ ಸಿದ್ದರಾಮಯ್ಯ ಮತ್ತೆ ಸಿಎಂ ಆಗುತ್ತಾರೆ ಎಂಬ ಕೃಷಿ ಸಚಿವ ಶಿವಶಂಕರ್ ರೆಡ್ಡಿ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಮಾಜಿ ಸಿಎಂ, ಅದೆಲ್ಲ ಸಭೆಯಲ್ಲಿ ಚರ್ಚೆಯಾಗಿಲ್ಲ ಎಂದರು.
ಇದೇ ವೇಳೆ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ವಿಶ್ವನಾಥ್ ಅವರನ್ನು ಸಮನ್ವಯ ಸಮಿತಿಗೆ ಸೇರ್ಪಡೆಗೊಳಿಸುವ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಅದು ಹೈಕಮಾಂಡ್ ಗೆ ಬಿಟ್ಟ ವಿಚಾರ ಎಂದರು.