ನಗರಸಭೆ ಚುನಾವಣೆ ನಿಮಿತ್ತ ಮಂಗಳವಾರ ಕಾಂಗ್ರೆಸ್ ಅಭ್ಯರ್ಥಿಗಳ ಪರ ಪ್ರಚಾರ ನಡೆಸಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂಬರುವ ಲೋಕಸಭಾ ಚುನಾವಣೆಯಲ್ಲಿ ರಮ್ಯಾ ಸ್ಪರ್ಧೆ ಖಚಿತ ಎಂದು ಹೇಳಿದರು. 'ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧೆ ಮಾಡುವಂತೆ ಕಾಂಗ್ರೆಸ್ ನ ರಾಷ್ಟ್ರೀಯ ಮುಖಂಡರು ರಮ್ಯಾಗೆ ಸೂಚನೆ ನೀಡಿದ್ದಾರೆ. ಅದಕ್ಕೆ ರಮ್ಯಾ ಕೂಡ ಒಪ್ಪಿಗೆ ಸೂಚಿಸಿದ್ದಾರೆ. ಶೀಘ್ರ ಅವರು ಮಂಡ್ಯಕ್ಕೆ ಭೇಟಿ ನೀಡಿ ಸ್ಥಳೀಯ ಮುಖಂಡರ ಸಭೆ ನಡೆಸಲಿದ್ದಾರೆ ಎಂದು ಹೇಳಿದರು.