ಬೆಂಗಳೂರು: 100 ದಿನ ಪೂರೈಸಿದ ಸಂಭ್ರಮದಲ್ಲಿರುವ ಕಾಂಗ್ರೆಸ್ - ಜೆಡಿಎಸ್ ದೋಸ್ತಿ ಸರ್ಕಾರದ ವಿರುದ್ಧ ಪ್ರತಿಪಕ್ಷ ಬಿಜೆಪಿ ಗುರುವಾರ ತೀವ್ರ ವಾಗ್ದಾಳಿ ನಡೆಸಿದ್ದು, ಅಭಿವೃದ್ಧಿ ಕಾರ್ಯಗಳು ನೆಲಕಚ್ಚಿದ್ದು, ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರಿಗೆ ಸರ್ಕಾರ ಉಳಿಯುತ್ತಾ ಅಥವಾ ಉರುಳುತ್ತಾ ಎಂಬುದೇ ದೊಡ್ಡ ಚಿಂತೆಯಾಗಿದೆ ಎಂದು ಆರೋಪಿಸಿದೆ.