ಜಾರಕಿಹೊಳಿ ಬ್ರದರ್ಸ್ ಮತ್ತು ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ನಡುವಿನ ಶೀತಲ ಸಮರ ಹಳೆ ಸುದ್ದಿ. ಆದರೆ ಈ ಬಾರಿ ಶಾಸಕ ಸತೀಶ್ ಜಾರಕಿಹೊಳಿ ತಮ್ಮ ಸೋದರ ರಮೇಶ್ ಜಾರಕಿಹೊಳಿ ವಿರುದ್ಧವೇ ಗರಂ ಆಗಿದ್ದಾರೆ. ಸತೀಶ ಜಾರಕಿಹೊಳಿ ಇದೇ ಮೊದಲ ಬಾರಿಗೆ ಸೋದರ ರಮೇಶ ಜಾರಕಿಹೊಳಿ ಸಚಿವ ಸ್ಥಾನದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದು, ರಮೇಶ ಜಾರಕಿಹೊಳಿ, ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಮತ್ತು ಡಿಕೆಶಿ, ಈ ಮೂವರ ಹಳೇ ವ್ಯವಹಾರ ನನಗೆ ಗೊತ್ತಿಲ್ಲ. ಇವರ ನಡುವೆ ಯಾವುದಾದರೂ ವ್ಯವಹಾರ ಇರಬಹುದು ಎಂದು ಹೊಸ ಬಾಂಬ್ ಸಿಡಿಸಿದ್ದಾರೆ.