ಕೆಲ ಶಾಸಕರಲ್ಲಿ ಅಸಮಾಧಾನ: ಸತೀಶ್ ಹೇಳಿಕೆಯಿಂದ ಕಾಂಗ್ರೆಸ್ ತಲ್ಲಣ!

ಕಾಂಗ್ರೆಸ್ ಪಕ್ಷದ ಕೆಲ ಶಾಸಕರಲ್ಲಿ ಅಸಮಾಧಾನ ಇರುವುದು ನಿಜ. ಅವರ ಮನವೊಲಿಸಲು ನಾಯಕರು ಪ್ರಯತ್ನಿಸುತ್ತಿದ್ದಾರೆ ಎಂದು ಮಾಜಿ ಸಚಿವ ಸತೀಶ್ ಜಾರಕಿಹೊಳಿ ನೀಡಿರುವ ಹೇಳಿಕೆಯಿಂದ ಕಾಂಗ್ರೆಸ್ ಪಕ್ಷದಲ್ಲಿ ಎಲ್ಲವೂ ಸರಿಯಿಲ್ಲ ಎಂಬುದು ದೃಢಪಟ್ಟಿದೆ.
ಸತೀಶ್ ಜಾರಕಿಹೊಳಿ
ಸತೀಶ್ ಜಾರಕಿಹೊಳಿ
Updated on: 

ಬೆಳಗಾವಿ: ಕಾಂಗ್ರೆಸ್ ಪಕ್ಷದ ಕೆಲ ಶಾಸಕರಲ್ಲಿ ಅಸಮಾಧಾನ ಇರುವುದು ನಿಜ. ಅವರ ಮನವೊಲಿಸಲು ನಾಯಕರು ಪ್ರಯತ್ನಿಸುತ್ತಿದ್ದಾರೆ  ಎಂದು ಮಾಜಿ ಸಚಿವ ಸತೀಶ್ ಜಾರಕಿಹೊಳಿ ನೀಡಿರುವ ಹೇಳಿಕೆಯಿಂದ ಕಾಂಗ್ರೆಸ್ ಪಕ್ಷದಲ್ಲಿ ಎಲ್ಲವೂ ಸರಿಯಿಲ್ಲ ಎಂಬುದು ದೃಢಪಟ್ಟಿದೆ.

ಕೆಲ ಕಾಂಗ್ರೆಸ್ ಶಾಸಕರು ಅಸಮಾಧಾನಗೊಂಡಿದ್ದಾರೆ. ಆದರೆ,  25 ರಿಂದ 30 ರಷ್ಟು ಶಾಸಕರಲ್ಲ, 6 ರಿಂದ 7 ಶಾಸಕರು ಅಸಮಾಧಾನಗೊಂಡಿದ್ದು, ನಾಯಕರು ಅವರನ್ನು ಮನವೊಲಿಸುತ್ತಾರೆ ಎಂದು ಸುದ್ದಿಗಾರರಿಗೆ ತಿಳಿಸಿದ್ದಾರೆ.

ಆದಾಗ್ಯೂ, ಪ್ರತಿಪಕ್ಷ ಬಿಜೆಪಿ ಕುದುರೆ ವ್ಯಾಪಾರ ಮೂಲಕ ಅಧಿಕಾರ ಹಿಡಿಯಲು ಪ್ರಯತ್ನಿಸುತ್ತಿದೆ . ಆದರೆ, ಆರೇಳು ಶಾಸಕರಿಗೆ ಮಾತ್ರ ಅಸಮಾಧಾನವಿದ್ದು, ಅವರನ್ನು ಸಮಾಧಾನಪಡಿಸುವ ಕೆಲಸ ನಡೆಯುತ್ತಿದೆ. ಕಾಂಗ್ರೆಸ್ ಪಕ್ಷದಲ್ಲಿ ಸಚಿವರಿಗಿಂತಲೂ ತಾವೂ ಬಲವಾಗಿದ್ದು, ಪಕ್ಷ ಬಿಡುವ ಪ್ರಶ್ನೆಯೇ ಇಲ್ಲ ಎಂದು ಹೇಳಿದ್ದಾರೆ.

ಈ ವಿಚಾರದ ಬಗ್ಗೆ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಜೊತೆಗೆ ಮಾತುಕತೆ ನಡೆಸಿದ್ದು, ಹೈಕಮಾಂಡ್  ಚುರುಕಾಗಿದೆ. ಅತೃಪ್ತಿ ಹೊಂದಿರುವಂತಹ  ಶಾಸಕರು ಪಕ್ಷ ಬಿಡುವುದಿಲ್ಲ.  ಎಲ್ಲವೂ ಸದ್ಯದಲ್ಲಿಯೇ ಬಗೆಹರಿಯಲಿದೆ ಎಂದು  ಸತೀಶ್ ಜಾರಕಿ ಹೊಳಿ ಭರವಸೆ ವ್ಯಕ್ತಪಡಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com